ಮೈಸೂರಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆ ಸ್ಥಾಪನೆಗೆ ಹೈಕೋರ್ಟ್ ತಡೆ

ಈ ಸುದ್ದಿಯನ್ನು ಶೇರ್ ಮಾಡಿ

high-court
ಮೈಸೂರು, ಜ.30-ನಗರದ ಗನ್‍ಹೌಸ್ ಬಳಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಪ್ರತಿಮೆ ಸ್ಥಾಪನೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಸ್ಥಳದಲ್ಲಿ ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ ಪ್ರತಿಮೆಯನ್ನು ಸ್ಥಾಪನೆ ಮಾಡಬಾರದು ಎಂದು ಕರ್ನಾಟಕ ರಾಜ್ಯ ಅರಸು ಸಂಘ ಹಾಗೂ ಅಖಿಲ ಭಾರತ ಕ್ಷತ್ರಿಯ ಮಹಾಸಭಾ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಹೈಕೋರ್ಟ್ ಹಂಗಾಮಿ ನ್ಯಾಯಾಧೀಶರಾದ ಎಚ್.ಜಿ.ರಮೇಶ್ ಹಾಗೂ ಪಿ.ಎಸ್.ದಿನೇಶ್‍ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠ ಪ್ರತಿಮೆ ಸ್ಥಾಪನೆಗೆ ತಡೆಯಾಜ್ಞೆ ನೀಡಿದೆ.

ಪ್ರತಿಮೆಯನ್ನು ಸ್ಥಾಪನೆ ಮಾಡಲು ಕಳೆದ ಆಗಸ್ಟ್ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಲಾನ್ಯಾಸ ನೆರವೇರಿಸಿದ್ದರು. ಮೂರು ಕೋಟಿ ರೂ. ವೆಚ್ಚದಲ್ಲಿ 11 ಅಡಿ ಎತ್ತರದ ಶ್ರೀಗಳ ಪಂಚಲೋಕ ಪುತ್ಥಳಿಯನ್ನು ಇಲ್ಲಿ ಸ್ಥಾಪನೆ ಮಾಡಲು ಉದ್ದೇಶಿಸಲಾಗಿತ್ತು. ಆದರೆ ಈಗ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

Facebook Comments

Sri Raghav

Admin