ಮೈಸೂರಿನಲ್ಲಿ ಡಿ.6ರಂದು ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಶಂಕುಸ್ಥಾಪನೆ

ಈ ಸುದ್ದಿಯನ್ನು ಶೇರ್ ಮಾಡಿ

Vishnu

ಮೈಸೂರು,ನ.30-ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಉದ್ಬೂರು ಬಳಿ ಡಿ.6ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮೂಲತಃ ವಿಷ್ಣುವರ್ಧನ್ ಅವರು ಮೈಸೂರಿನವರೇ ಆಗಿದ್ದು , ಅವರ ಸ್ಮಾರಕವನ್ನು ಇಲ್ಲಿಯೇ ನಿರ್ಮಾಣ ಮಾಡಲು ಅನುಮತಿ ದೊರೆತಿದೆ. ಸ್ಥಳವನ್ನು ಗುರುತಿಸಿದ್ದರೂ ಇತ್ತೀಚೆಗೆ ಜಾಗದ ಮಾಲೀಕರು ಸ್ಥಳ ಬಿಟ್ಟುಕೊಡುವುದಿಲ್ಲ ಎಂದು ತಿಳಿಸಿದ್ದರು. ಈ ವಿಚಾರವಾಗಿ ವಿವಾದವೂ ನಡೆದಿತ್ತು.  ಈ ಹಿನ್ನೆಲೆಯಲ್ಲಿ ಸ್ಥಳದ ಸಮಸ್ಯೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಿಲ್ಲಾಧಿಕಾರಿ ರಂದೀಪ್ ಅವರಿಗೆ ತಿಳಿಸಿದರು. ಈ ಸಮಸ್ಯೆಯನ್ನು ಬಗೆಹರಿದ ಹಿನ್ನಲೆಯಲ್ಲಿ ವಿಷ್ಣುವರ್ಧನ್ ಸ್ಮಾರಕದ ಶಂಕುಸ್ಥಾಪನೆಗೆ ದಿನಾಂಕ ನಿಗದಿಯಾಗಿದೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin