ಮೈಸೂರಿನಲ್ಲೂ ರಾಜಕಾಲುವೆ ಒತ್ತುವರಿ ತೆರವಿಗೆ ಚಾಲನೆ

ಈ ಸುದ್ದಿಯನ್ನು ಶೇರ್ ಮಾಡಿ

mysore--rajakaluve

ಮೈಸೂರು,ಆ.25-ರಾಜ್ಯ ಸರ್ಕಾರವು ಈಗಾಗಲೇ ರಾಜಧಾನಿಯಲ್ಲಿ ರಾಜಕಾಲುವೆ ಒತ್ತವರಿ ಮಾಡಿಕೊಂಡು ಕಟ್ಟಡಗಳನ್ನು ತೆರವು ಮಾಡಿದ್ದ ಬೆನ್ನಲೇ ಸಾಂಸ್ಕೃತಿ ನಗರ ಮೈಸೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವಿಗೆ ಇಂದು ಚಾಲನೆ ನೀಡಿದೆ. ರಾಜಕಾಲುವೆಯನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಾಣ ಮಾಡಿರುವ ಕಟ್ಟಡಗಳನ್ನು ತೆರವುಗೊಳಿಸಲು ಮೈಸೂರು ಮಹಾನಗರ ಪಾಲಿಕೆ ರಣಕಹಳೆ ಮೊಳಗಿಸಿದೆ. ಈ ಹಿನ್ನೆಲೆಯಲ್ಲಿ ಇಂದು ನಗರದ ದಿವಾನ್ ರಸ್ತೆಯಲ್ಲಿರುವ ಗಣೇಶ ಪೆಟ್ರೋಲ್ ಬಂಕ್‍ಗೆ ಪಾಲಿಕೆಯಿಂದ ನೋಟಿಸ್ ಜಾರಿಗೊಳಿಸಲಾಗಿದೆ.

 

ರಾಜಕಾಲುವೆ ಮೇಲೆ ಕಟ್ಟಡ ನಿರ್ಮಾಣ ಮಾಡಿಕೊಂಡಿರುವ ಮಾಲೀಕರಿಗೆ ನೋಟಿಸ್ ನೀಡಲಿದ್ದು, ಒಂದು ವೇಳೆ ಮಾಲೀಕರು ಕಟ್ಟಡಗಳನ್ನು ತೆರವುಗೊಳಿಸದಿದ್ದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಮೇಯರ್ ಭೈರಪ್ಪ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಳಗ್ಗೆ ಪೆಟ್ರೋಲ್ ಬಂಕ್‍ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮೇಯರ್ ಭೈರಪ್ಪ ನೋಟಿಸ್ ನೀಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾಲುವೆ ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಿಸಿಕೊಂಡಿರುವ ಕಟ್ಟಡಗಳನ್ನು ಗುರುತಿಸಲು ವಿಶೇಷ ತಂಡ ರಚಿಸಲಾಗಿದ್ದು , ಗುರುತಿಸಿರುವ ಕಟ್ಟಡಗಳ ಮೇಲೆ ನೋಟಿಸ್ ಜಾರಿ ಮಾಡಲಾಗುತ್ತಿದೆ ಎಂದರು. ಒಂದು ವೇಳೆ ಮಾಲೀಕರು ಕಟ್ಟಡ ತೆರವುಗೊಳಿಸದಿದ್ದರೆ ನಿರ್ದಾಕ್ಷಿಣ್ಯವಾಗಿ ನಾವೇ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಗುಡುಗಿದ್ದಾರೆ. ಮೈಸೂರು ಮೆಡಿಕಲ್ ಕಾಲೇಜಿನವರು ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಅವರಿಗೂ ಕೂಡ ನೋಟಿಸ್ ನೀಡಲಾಗುತ್ತಿದೆ ಎಂದು ತಿಳಿಸಿದರು.

 

► Follow us on –  Facebook / Twitter  / Google+

 

 

Facebook Comments

Sri Raghav

Admin