ಮೈಸೂರಿನ ಮಾಲ್-ಮಲ್ಟಿಪ್ಲೆಕ್ಸ್ ಗಳಲ್ಲಿ ಕೂಲ್ ಡ್ರಿಂಕ್ಸ್ ನಿಷೇಧ, ಎಳನೀರಿಗೆ ಆದ್ಯತೆ

ಈ ಸುದ್ದಿಯನ್ನು ಶೇರ್ ಮಾಡಿ

Elaneeri--011

ಮೈಸೂರು, ಆ.11-ಇನ್ನು ಮುಂದೆ ನಗರದ ಮಲ್ಟಿಫ್ಲೆಕ್ಸ್‍ಗಳಲ್ಲಿ ತಂಪು ಪಾನೀಯಗಳ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಂದೀಪ್ ಆದೇಶ ಹೊರಡಿಸಿದ್ದಾರೆ. ಮೈಸೂರು ಚಲನಚಿತ್ರ ಒಕ್ಕೂಟಕ್ಕೆ ಜಿಲ್ಲಾಧಿಕಾರಿಗಳು ಪತ್ರ ಬರೆದು ನಗರದ ಮಾಲ್‍ಗಳು, ಮಲ್ಟಿಪ್ಲೆಕ್ಸ್ ಗಳಲ್ಲಿ ತಂಪು ಪಾನೀಯಗಳನ್ನು ಮಾರಾಟ ಮಾಡದೆ ಇದರ ಬದಲಿಗೆ ಎಳನೀರನ್ನು ಮಾರಾಟ ಮಾಡುವಂತೆ ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರೈತರ ಹಿತದೃಷ್ಟಿಯಿಂದ ಎಳನೀರನ್ನು ಮಾಲ್, ಮಲ್ಟಿಪ್ಲೆಕ್ಸ್ ಗಳಲ್ಲಿ ಮಾರಾಟ ಮಾಡಬೇಕು. ಎಳನೀರು ಆರೋಗ್ಯಕ್ಕೆ ಉತ್ತಮವಾದ ಪಾನೀಯ ಪದಾರ್ಥ. ಇದರ ಬಗ್ಗೆ ಎಂಎಲ್‍ಎಸಿ ಎಂ.ಕೆ.ಪ್ರಾಣೇಶ್ ಅವರು ತೋಟಗಾರಿಕೆ ಸಚಿವರಿಗೆ ಪತ್ರ ಬರೆದು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.
ಅದರಂತೆ ರೈತರ ಸಮಸ್ಯೆ ಪರಿಹಾರಕ್ಕೆ ತೋಟಗಾರಿಕೆ ಆಯುಕ್ತ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ಹೇಳಿದರು.

Facebook Comments

Sri Raghav

Admin