ಮೈಸೂರು ಚಾಮುಂಡಿಬೆಟ್ಟದಲ್ಲಿ ಸೆಲ್ಫೀಗೆ ನಿಷೇಧ

ಈ ಸುದ್ದಿಯನ್ನು ಶೇರ್ ಮಾಡಿ

Selfie

ಮೈಸೂರು, ಆ.11- ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಇನ್ನು ಮುಂದೆ ಸೆಲ್ಫಿತೆಗೆದುಕೊಳ್ಳುವುದನ್ನು ನಿಷೇಧಿಸಲಾಗಿದೆ ಎಂದು ನಗರ ಡಿಸಿಪಿ ರುದ್ರಮುನಿ ತಿಳಿಸಿದ್ದಾರೆ.  ದೇಶದಾದ್ಯಂತ ಹಲವೆಡೆ ಸೆಲ್ಫಿಗಾಗಿ ಹಲವಾರು ಮಂದಿ ಸಾವನ್ನಪ್ಪುತ್ತಿದ್ದು, ಈ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲೂ ಸಹ ಸೆಲ್ಫಿ ತೆಗೆದುಕೊಳ್ಳುವ ವೇಳೆ ಅಪಘಾತಗಳು ಸಂಭವಿಸಬಹುದು ಎಂಬ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯಾಗಿ ಸೆಲ್ಫಿ ನಿಷೇಧಿಸಲಾಗುತ್ತಿದೆ ಎಂದು ಹೇಳಿದರು.  ಆ.21ರಂದು ಚಾಮುಂಡಿಬೆಟ್ಟದ ಸುತ್ತಮುತ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಸೆಲ್ಫಿ ತೆಗೆದುಕೊಳ್ಳುವವರಿಗೆ ಎಚ್ಚರಿಕೆ ನೀಡಲಿದ್ದಾರೆ ಎಂದು ತಿಳಿಸಿದರು.  ಸೆಲ್ಫಿ ತೆಗೆದುಕೊಳ್ಳುವುದರಿಂದ ಬೆಟ್ಟದಲ್ಲಿ ಯಾವುದೇ ಸಾವು-ನೋವು ಸಂಭವಿಸಬಾರದು  ಎಂಬ ಕಳಕಳಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದರು.

► Follow us on –  Facebook / Twitter  / Google+

Facebook Comments

Sri Raghav

Admin