ಮೈಸೂರು ಚಾಮುಂಡಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರ ನಿಷೇಧ

ಈ ಸುದ್ದಿಯನ್ನು ಶೇರ್ ಮಾಡಿ

Chamundi-Hills

ಮೈಸೂರು, ಅ.8- ಚಾಮುಂಡಿ ಬೆಟ್ಟಕ್ಕೆ ಇಂದಿನಿಂದ ಖಾಸಗಿ ವಾಹನಗಳ ಸಂಚಾರಕ್ಕೆ ಮತ್ತೆ ಪ್ರವೇಶ ನಿಷೇಧಿಸಲಾಗಿದೆ. ನಗರದ ಲಲಿತ್ಮಹಲ್ ಹೆಲಿಪ್ಯಾಡ್ನಿಂದ ಚಾಮುಂಡಿಬೆಟ್ಟಕ್ಕೆ ಉಚಿತ ಬಸ್ ಸೇವೆಯನ್ನು ಆರಂಭಿಸಲಾಗಿದೆ. ಹಾಗಾಗಿ ಪ್ರವಾಸಿಗರು ಲಲಿತ್ ಮಹಲ್ ಸಮೀಪವೇ ವಾಹನ ನಿಲುಗಡೆ ಮಾಡಿ ಬೆಟ್ಟಕ್ಕೆ ಆಗಮಿಸಬೇಕೆಂದು ನಗರ ಪೊಲೀಸ್ ಆಯುಕ್ತ ದಯಾನಂದ್ ಸಲಹೆ ಮಾಡಿದ್ದಾರೆ. ದಸರಾ ಮಹೋತ್ಸವದ ಪ್ರಯುಕ್ತ ಚಾಮುಂಡಿ ದೇವಿ ದರ್ಶನಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ವಾಹನಗಳ ನಿಲುಗಡೆಗೆ ಸ್ಥಳವಾಕಾಶದ ಕೊರತೆ ಎದುರಾಗಿದೆ. ಹಾಗಾಗಿ ಇಂದಿನಿಂದ ಅ.16ರವರೆಗೂ ಚಾಮುಂಡಿ ಬೆಟ್ಟಕ್ಕೆ ಬೆಳಗ್ಗೆ 6ರಿಂದ ರಾತ್ರಿ 8.30ರವರೆಗೆ ಖಾಸಗಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಹೇಳಿದರು.

ದೇವಾಲಯಕ್ಕೆ ಬರವ ಪ್ರವಾಸಿಗರು ತಮ್ಮ ವಾಹನಗಳನ್ನು ಲಲಿತ ಮಹಲ್ ಹೆಲಿಪ್ಯಾಡ್ ಬಳಿ ನಿಲ್ಲಿಸಿ ಅಲ್ಲಿಂದ ಬಸ್ನಲ್ಲಿ ಬೆಟ್ಟಕ್ಕೆ ತೆರಳಬೇಕೆಂದು ಸೂಚಿಸಿದ್ದಾರೆ. ಈ ಮೊದಲೇ ಅ.1ರಿಂದಲೇ ಪ್ರವಾಸಿಗರಿಗೆ ಖಾಸಗಿ ವಾಹನ ನಿಷೇಧಿಸಲಾಗಿದ್ದು, ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮೊನ್ನೆ ಮತ್ತೆ ಖಾಸಗಿ ವಾಹನ ಪ್ರವೇಶಕ್ಕೆ ಅನುಮತಿ ನೀಡಲಾಗಿತ್ತು. ಬೆಟ್ಟಕ್ಕೆ ಆಗಮಿಸುವ ಭಕ್ತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪುನಃ ಇಂದಿನಿಂದ ಖಾಸಗಿ ವಾಹನಗಳಿಗೆ ನಿಷೇಧ ಹೇರಲಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin