ಮೈಸೂರು ದಸರಾಗೆ ಪ್ರವಾಸಿಗರನ್ನು ಆಕರ್ಷಿಸಲು ಪೋಸ್ಟರ್ ಬಿಡುಗಡೆ

ಈ ಸುದ್ದಿಯನ್ನು ಶೇರ್ ಮಾಡಿ

mysore

ಮೈಸೂರು, ಸೆ. 12-ಈ ಬಾರಿಯ ದಸರಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿ ಹಾಗೂ ಹೊರರಾಜ್ಯದ ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ಪೋಸ್ಟರ್ ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಹಕಾರ ಸಚಿವ ಎಚ್.ಎಸ್.ಮಹದೇವಪ್ರಸಾದ್ ತಿಳಿಸಿದರು.ಈ ಬಾರಿಯ ಮೈಸೂರು ದಸರಾದ ಪೋಸ್ಟರ್ ರ್‍ಗಳನ್ನು ಇಂದು ಬಿಡುಗಡೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೋಸ್ಟರ್ಗಳನ್ನು ನಗರದ ಪ್ರಮುಖ ಬಸ್‍ನಿಲ್ದಾಣಗಳು,ರೈಲ್ವೆ ನಿಲ್ದಾಣ, ಏರ್ಪೋರ್ಟ್ ಗಳಲ್ಲಿ ಪ್ರದರ್ಶಿಸುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ಉದ್ದೇಶಿಸಲಾಗಿದೆ ಎಂದರು.

ಮೈಸೂರು ದಸರಾ ಬಗ್ಗೆ ವಿಡಿಯೋ, ವಾಟ್ಸಪ್ ಸಂದೇಶಗಳನ್ನು ಸಿದ್ಧಪಡಿಸಲಾಗಿದ್ದು, ಅದನ್ನು ವಾರ್ತಾ ಇಲಾಖೆಯು ಅತಿ ಶೀಘ್ರದಲ್ಲಿ ಬಿಡುಗಡೆ ಮಾಡಿ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ತಲುಪಿಸುವ ಮೂಲಕ ದಸರಾಕ್ಕೆ ಆಗಮಿಸಲು ಪ್ರೇರೇಪಿಸಲಾಗುವುದು ಎಂದರು. ಇದೇ 15ರೊಳಗೆ ದಸರಾ ಉಪಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಹಾಗೂ 15 ರೊಳಗೆ ದಸರಾದ ಕಾರ್ಯಕ್ರಮಗಳ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು ಅವರು ಹೇಳಿದರು.ಕಾವೇರಿ ವಿವಾದ ದಸರಾದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಈ ಸಂಬಂಧ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ದಸರಾಗೆ ಆಗಮಿಸುವ ಪ್ರವಾಸಿಗರಿಗೆ ಯಾವುದೇ ರೀತಿಯಲ್ಲೂ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.ಈ ಸಂದರ್ಭದಲ್ಲಿ ಸಂಸದ ಧೃವನಾರಾಯಣ್, ಜಿಲ್ಲಾಧಿಕಾರಿ ರಮ್‍ದೀಪ್, ಪಾಲಿಕೆ ಆಯುಕ್ತ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin