ಮೈಸೂರು ದಸರಾಗೆ ರಿಯೋ ಒಲಿಂಪಿಕ್ಸ್ ಪದಕ ವಿಜೇತರಿಗೆ ಆಹ್ವಾನ

ಈ ಸುದ್ದಿಯನ್ನು ಶೇರ್ ಮಾಡಿ

Sindhu-Saksh9

ಮೈಸೂರು, ಸೆ.4- ರಿಯೋ ಒಲಿಂಪಿಕ್ಸ್‍ನಲ್ಲಿ ಪದಕ ವಿಜೇತರಾಗಿ ದೇಶದ ಗೌರವವನ್ನು ಹೆಚ್ಚಿಸಿದ ಕ್ರೀಡಾಪಟುಗಳಾದ ಸಿಂಧು, ಸಾಕ್ಷಿ ಅವರನ್ನು ವಿಶ್ವವಿಖ್ಯಾತ ಮೈಸೂರು ದಸರಾಗೆ ಆಹ್ವಾನಿಸಲು ನಿರ್ಧರಿಸಲಾಗಿದೆ.  ಮೈಸೂರು ದಸರಾದಲ್ಲಿ ನಡೆಯಲಿರುವ ಕ್ರೀಡಾಕೂಟಗಳ ಚಾಲನೆಗೆ ಒಲಿಂಪಿಕ್ಸ್ ಪದಕ ವಿಜೇತರಿಗೆ ಆಹ್ವಾನ ನೀಡಲು ದಸರಾ ಸಮಿತಿ ನಿರ್ಧರಿಸಿದೆ. ಜಿಲ್ಲಾಧಿಕಾರಿ ರಂದೀಪ್ ಅವರು ಈ ಬಗ್ಗೆ ಚರ್ಚೆ ನಡೆಸಿದ್ದು, ಒಲಿಂಪಿಕ್ ಪದಕ ವಿಜೇತ ಕ್ರೀಡಾಪಟುಗಳಿಗೆ ಆಹ್ವಾನ ನೀಡಿ ಅವರನ್ನು ದಸರಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮೂಲಕ ದಸರಾಕ್ಕೆ ಇನ್ನೂ ಹೆಚ್ಚಿನ ಮೆರುಗು ತರುವಂತೆ ಮಾಡುವ ಉದ್ದೇಶ ಹೊಂದಲಾಗಿದೆ.

ಪ್ರತಿಷ್ಠಿತ ಮೈಸೂರು ದಸರಾ ವಿಶ್ವವಿಖ್ಯಾತ ಚಿನ್ನದ ಅಂಬಾರಿ ಮೆರವಣಿಗೆ ಕಣ್ತುಂಬಿಕೊಳ್ಳಲು ದೇಶ-ವಿದೇಶಗಳಿಂದ ಜನ ಆಗಮಿಸುತ್ತಾರೆ. ವಿವಿಧ ಗಣ್ಯರಿಗೆ ಪಾಲ್ಗೊಳ್ಳಲು ಈ ಸಂದರ್ಭದಲ್ಲಿ ಜಿಲ್ಲಾಡಳಿತ ಆಹ್ವಾನ ನೀಡಿದೆ.  ಈ ಬಾರಿ ಒಲಿಂಪಿಕ್ ಪದಕ ವಿಜೇತರನ್ನು ಆಹ್ವಾನಿಸಿ ಅವರನ್ನು ಗೌರವಿಸಲು ತೀರ್ಮಾನಿಸಿರುವುದು ತಿಳಿದುಬಂದಿದೆ.

► Follow us on –  Facebook / Twitter  / Google+

Facebook Comments

Sri Raghav

Admin