ಮೈಸೂರು ಮೇಯರ್ ಭಾಗ್ಯವತಿಗೆ ನೋಟಿಸ್

ಈ ಸುದ್ದಿಯನ್ನು ಶೇರ್ ಮಾಡಿ

Bhagyavati--01
ತುಮಕೂರು, ಮಾ.8- ಮೈಸೂರು ಮೇಯರ್ ಭಾಗ್ಯವತಿ ಕಾನೂನು ಬಾಹಿರವಾಗಿ ಅಧಿಕಾರ ಹಿಡಿದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ನಾಳೆ ವಿಚಾರಣೆಯನ್ನು ನಿಗದಪಡಿಸಿ ಪ್ರಾದೇಶಿಕ ಆಯುಕ್ತರು, ಭಾಗ್ಯವತಿಯವರಿಗೆ ನೋಟಿಸ್ ನೀಡಿದ್ದಾರೆ.   ಜನವರಿ 24ರಂದು ನಡೆದ ಮೈಸೂರು ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್‍ನ ಅಧಿಕೃತ ಅಭ್ಯರ್ಥಿ ಕಮಲ ಅವರ ವಿರುದ್ದ ಸ್ಪರ್ಧಿಸಿ ಭಾಗ್ಯವತಿ ಅವರು ಜೆಡಿಎಸ್ ಹಾಗೂ ಬಿಜೆಪಿ ಬೆಂಬಲದೊಂದಿಗೆ ಮೇಯರ್ ಗದ್ದುಗೆ ಏರಿದ್ದರು.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ನಗರಾಧ್ಯಕ್ಷ ಡಾ.ಮೂರ್ತಿ ಪ್ರಾದೇಶಿಕ ಆಯುಕ್ತರ ನ್ಯಾಯಾಲಯಕ್ಕೆ ಭಾಗ್ಯವತಿ ಮೇಯರ್ ಹುದ್ದೆ ಕಾನೂನು ಬಾಹಿರವೆಂದು ಘೋಷಿಸುವಂತೆ ಪ್ರಾದೇಶಿಕ ಆಯುಕ್ತರಿಗೆ ದೂರು ನೀಡಿದ್ದರು.ಈ ಹಿನ್ನೆಲೆಯಲ್ಲಿ ಪ್ರಾದೇಶಿಕ ಆಯುಕ್ತರು ಭಾಗ್ಯವತಿ ಅವರಿಗೆ ನೋಟಿಸ್ ನೀಡಿ ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಾದೇಶಿಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.

Facebook Comments

Sri Raghav

Admin