ಮೈಸೂರು ರೈಲ್ವೆ ನಿಲ್ದಾಣದಲ್ಲಿ ನೂತನ ಎಸ್ಕೆಲೇಟರ್ ಗಳ ಲೋಕಾರ್ಪಣೆ

ಈ ಸುದ್ದಿಯನ್ನು ಶೇರ್ ಮಾಡಿ

suresh-prabhu

ಮೈಸೂರು,ನ.5- ಮೈಸೂರು ರೈಲ್ವೆ ನಿಲ್ದಾಣದಲ್ಲಿ 2.70 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಎರಡು  ಎಸ್ಕೆಲೇಟರ್ ಗಳನ್ನು ಕೇಂದ್ರ ರೈಲ್ವೆ ಸಚಿವ ಸುರೇಶ್‍ಪ್ರಭು ಅವರು ಇಂದು ಸಂಜೆ ಲೋಕಾರ್ಪಣೆ ಮಾಡಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಅವರು ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಉದ್ಘಾಟನೆ ಬಳಿಕ ರೈಲ್ವೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ನಿಲ್ದಾಣದಲ್ಲಿ ಎರಡು  ಎಸ್ಕೆಲೇಟರ್  ಅಳವಡಿಕೆಗೆ ಎರಡು ವರ್ಷಗಳಿಂದ ಕಾಮಗಾರಿ ನಡೆದಿತ್ತು. ಈ ಉದ್ಘಾಟನೆಗೊಳ್ಳಲಿದೆ. ಎರಡು ಎಕ್ಸ್ಯೂಲೇಟರ್ ಕಾಮಗಾರಿಗೆ 2.70 ಕೋಟಿ ರೂ. ವೆಚ್ಚವಾಗಿದ್ದು, ಎಸ್ಕೆಲೇಟರ್ ಗೆ ಸೆನ್ಸರ್ ಅಳವಡಿಸಲಾಗಿದೆ. ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿರುವುದನ್ನು ತಿಳಿಸುತ್ತದೆಯಲ್ಲದೆ ಪ್ರಯಾಣಿಕರಲಿಲ್ಲದಿದ್ದರೆ ಸ್ವಯಂಪ್ರೇರಿತವಾಗಿ  ಎಸ್ಕೆಲೇಟರ್ ಸ್ಥಗಿತಗೊಳ್ಳಲಿದೆ. ಇದರಿಂದ ಸಾಕಷ್ಟು ಇಂಧನ ಉಳಿತಾಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin