ಮೈಸೂರು ವಿವಿ ವಿಶ್ರಾಂತ ಕುಲಪತಿ ಪ್ರೊ.ಕೆ.ರಂಗಪ್ಪ ಜು.10 ರಂದು ಜೆಡಿಎಸ್‍ಗೆ ಸೇರ್ಪಡೆ

ಈ ಸುದ್ದಿಯನ್ನು ಶೇರ್ ಮಾಡಿ

Rangappa--01

ಮೈಸೂರು, ಜು.9-ಮೈಸೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ರಂಗಪ್ಪ ಅವರು ಜು.10 ರಂದು ಅಧಿಕೃತವಾಗಿ ಜೆಡಿಎಸ್‍ಗೆ ಸೇರ್ಪಡೆಗೊಳ್ಳಲಿದ್ದಾರೆ. ನಗರದ ದಟ್ಟಕ್ಕಳ್ಳಿಯ ಸಾರಾ ಕನ್‍ವೆನ್ಷನ್ ಹಾಲ್‍ನಲ್ಲಿ ಅಂದು ಸಂಜೆ ನಡೆಯಲಿರುವ ಅದ್ಧೂರಿ ಸಮಾರಂಭದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಸೇರಿದಂತೆ ಇನ್ನಿತರ ನಾಯಕರ ಸಮ್ಮುಖದಲ್ಲಿ ರಂಗಪ್ಪ ಅವರು ಜೆಡಿಎಸ್‍ಗೆ ಸೇರ್ಪಡೆಯಾಗಲಿದ್ದಾರೆ. ಕಳೆದ ವಾರವಷ್ಟೆ ಮಾಜಿ ಸಂಸದ ಎಚ್.ವಿಶ್ವನಾಥ್ ಅವರು ಕಾಂಗ್ರೆಸ್ ತೊರೆದು ಜೆಡಿಎಸ್‍ಗೆ ಸೇರ್ಪಡೆಗೊಂಡಿದ್ದರು.

ಈ ಮೂಲಕ ಮೈಸೂರು ಭಾಗದಲ್ಲಿ ಜೆಡಿಎಸ್‍ಗೆ ಮತ್ತಷ್ಟು ಬಲ ಬಂದಂತಾಗಿದೆ. ಇದೀಗ ರಂಗಪ್ಪ ಅವರ ಜೆಡಿಎಸ್ ಸೇರ್ಪಡೆಯಿಂದ ಪಕ್ಷದ ಬಲ ಇಮ್ಮಡಿಯಾಗಲಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin