ಮೈಸೂರು : ಸಾಂಬಾರು ಪಾತ್ರೆಗೆ ಬಿದ್ದು ಗಾಯಗೊಂಡಿದ್ದ ಅಡುಗೆ ಸಹಾಯಕ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

ಮೈಸೂರು, ಮಾ.23-ಚಿಕನ್ ಸಾಂಬಾರು ಪಾತ್ರೆಯಲ್ಲಿ ಬಿದ್ದು ತೀವ್ರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಗರದ ಉದಯಗಿರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಡುಗೆ ಸಹಾಯಕ ರಮೇಶ್(21) ಮೃತಪಟ್ಟ ದುರ್ದೈವಿ. ಕಳೆದ ಕೆಲವು ದಿನಗಳ ಹಿಂದೆ ರಮೇಶ್ ಅವರು ಕಾರ್ಯಕ್ರಮವೊಂದರಲ್ಲಿ ಅಡುಗೆ ಮಾಡುತ್ತಿದ್ದಾಗ ಚಿಕನ್ ಸಾಂಬಾರನ್ನು ಬೇರೊಂದು ಪಾತ್ರೆಗೆ ಹಾಕುತ್ತಿದ್ದಾಗ ಆಕಸ್ಮಿಕವಾಗಿ ಪಾತ್ರೆಗೆ ಬಿದ್ದು ಗಾಯಗೊಂಡಿದ್ದರು. ಕೂಡಲೇ ಅವರನ್ನು ಸ್ನೇಹಿತರ ನೆರವಿನಿಂದ ಕೆ.ಆರ್.ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.  ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಡುಗೆ ಸಹಾಯಕ ರಮೇಶ್ ಇಂದು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin