ಮೊದಲ ಬಾರಿಗೆ ಮನಸಾರೆ ಮೋದಿಯನ್ನು ಹೊಗಳಿದ ರಾಹುಲ್‍ಗಾಂಧಿ

ಈ ಸುದ್ದಿಯನ್ನು ಶೇರ್ ಮಾಡಿ

Rahul-Gandho

ನವದೆಹಲಿ, ಸೆ.30-ಉರಿ ದಾಳಿ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಪಾಕ್ ಉತ್ರರ ವಿರುದ್ಧ ಸೇನಾ ಕಾರ್ಯಾಚರಣೆ ನಡೆಸಿದ್ದಕ್ಕಾಗಿ ಕಾಂಗ್ರೆಸ್ ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಎರಡೂವರೆ ವರ್ಷದಲ್ಲೇ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಳ್ಳೆಯ ನಿರ್ಧಾರ ತೆಗೆದುಕೊಂಡಿದೆ ಎಂದು ರಾಹುಲ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರ ವಿರುದ್ಧ ಸದಾ ವಾಗ್ದಾಳಿ ನಡೆಸುತ್ತಿದ್ದ ರಾಹುಲ್, ಸೇನಾ ದಾಳಿ ಬಗ್ಗೆ ಮೋದಿ ತೆಗೆದುಕೊಂಡಿರುವ ನಿರ್ಧಾರ ಕರುಇತು ಮೊದಲನೆ ಬಾರಿಗೆ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin