ಮೊಬೈಲ್ ಟವರ್ ಏರಿ ಆತ್ಮಹತ್ಯೆ ಬೆದರಿಕೆ ಹಾಕಿದ ಬಿ.ಟೆಕ್ ವಿದ್ಯಾರ್ಥಿ

ಈ ಸುದ್ದಿಯನ್ನು ಶೇರ್ ಮಾಡಿ

Tower-v01

ಲಿಂಗಸಗೂರು, ಫೆ.22-ಬಿಎಸ್‍ಸಿ ಕೃಷಿ ಪದವೀಧರ ವಿದ್ಯಾರ್ಥಿಗಳನ್ನು ಕೃಷಿ ಇಲಾಖೆಯ ಖಾಲಿ ಹುದ್ದೆಗಳಿಗೆ ಪರಿಗಣಿಸಬೇಕೆಂದು ಆಗ್ರಹಿಸಿ ಕೃಷಿ ವಿವಿ ಆವರಣದಲ್ಲಿ ಕಳೆದ ಐದು ದಿನಗಳಿಂದ ಹೋರಾಟ ನಡೆಸುತ್ತಿದ್ದರೂ ಅಧಿಕಾರಿಗಳು ಸ್ಪಂದಿಸದ ಕಾರಣ ಧಾರವಾಡ ಮೂಲದ ಬಿ.ಟೆಕ್ ವಿದ್ಯಾರ್ಥಿ ಸಂಕೇತ್ ಮೊಬೈಲ್ ಟವರ್ ಏರಿ ಕುಳಿತು ಆತ್ಮಹತ್ಯೆ ಬೆದರಿಕೆಯೊಡ್ಡಿದ ಘಟನೆ ನಡೆದಿದೆ.  ಕೃಷಿ ತಾಂತ್ರಿಕ ಪದವೀಧರರನ್ನು ಕೃಷಿ ಇಲಾಖೆಯಲ್ಲಿರುವ ಖಾಲಿ ಹುದ್ದೆಗಳಿಗೆ ಪರಿಗಣಿಸಿ ಅವರಿಗೆ ನೌಕರಿ ಒದಗಿಸಿಕೊಡಬೇಕು. ಇಲ್ಲವಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಂಕೇತ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಅಧಿಕಾರಿಗಳು ಎಷ್ಟೇ ಮನವೊಲಿಸಿದರೂ ಆತ ಟವರ್‍ನಿಂದ ಕೆಳಗಿಳಿಯಲು ಸಿದ್ಧನಿಲ್ಲ. ಬೇಡಿಕೆ ಈಡೇರುವವರೆಗೆ ಟವರ್‍ನಿಂದ ಕೆಳಗಿಳಿಯುವುದಿಲ್ಲ ಎಂದು ತಿಳಿಸಿದ್ದಾರೆ.  ಇದು ಪೊಲೀಸರು ಹಾಗೂ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin