ಮೋದಿ ಅಮಾಯಕರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದಾರೆ : ಬಿ.ಕೆ.ಚಂದ್ರಶೇಖರ್ ವ್ಯಂಗ್ಯ

ಈ ಸುದ್ದಿಯನ್ನು ಶೇರ್ ಮಾಡಿ

BK-chandra-sheka-t

ಬೆಂಗಳೂರು, ನ.18- ವಿದೇಶದಲ್ಲಿರುವ ಕಪ್ಪು ಹಣ ವಾಪಸು ತರದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಮಾಯಕ ಜನರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲು ಹೊರಟಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸಭಾಪತಿ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ.ಚಂದ್ರಶೇಖರ್ ವ್ಯಂಗ್ಯವಾಡಿದ್ದಾರೆ.
ಪ್ರೆಸ್‍ಕ್ಲಬ್‍ನಲ್ಲಿ ಸಮತಾ ಸೈನಿಕ ದಳ ಏರ್ಪಡಿಸಿದ್ದ ನೋಟು ನಿಷೇಧ-ಸಾಧಕ ಬಾಧಕ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಲೋಕಸಭೆ ಚುನಾವಣೆಗೂ ಮುನ್ನ ಪ್ರಣಾಳಿಕೆಯಲ್ಲಿ ವಿದೇಶದಲ್ಲಿರುವ ಕಪ್ಪು ಹಣವನ್ನು ಅಕಾರಕ್ಕೆ ಬಂದ ನೂರು ದಿನಗಳಲ್ಲಿ ವಾಪಸು ತಂದು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ಹಾಕುವುದಾಗಿ ನರೇಂದ್ರ ಮೋದಿ ಹೇಳಿದ್ದರು. ಆದರೆ, ಅದು ಸಾಧ್ಯವಿಲ್ಲ ಎಂಬುದನ್ನು ಅರಿತು ಬಡವರು, ರೈತಾಪಿ ವರ್ಗ, ಶ್ರೀಸಾಮಾನ್ಯರ ಮೇಲೆ ಸರ್ಜಿಕಲ್ ಸ್ಟ್ರೈಕ್ ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು.

ಇಂದು ದೇಶದ ಯಾವುದೇ ಬ್ಯಾಂಕ್, ಎಟಿಎಂಗಳ ಮುಂದೆ ಕಿಲೋ ಮೀಟರ್‍ಗಟ್ಟಲೆ ಮಹಿಳೆಯರು, ಮಕ್ಕಳು, ವೃದ್ಧರು ತಾವೇ ಗಳಿಸಿದ ಹಣಕ್ಕೆ ಕ್ಯೂ ನಿಂತು ಭಿಕ್ಷೆ ಬೇಡುವ ಸ್ಥಿತಿ ಬಂದಿದೆ. ಇದು ಮೋದಿ ದೇಶಕ್ಕೆ ಕೊಟ್ಟ ಕೊಡುಗೆ ಎಂದು ಕಿಚಾಯಿಸಿದರು. ಸರ್ಜಿಕಲ್ ಸ್ಟ್ರೈಕ್‍ನಲ್ಲಿರುವ ಮೋದಿ ಪ್ರತಿಯೊಂದನ್ನೂ ಸಾಹಸ ಮತ್ತು ವಿಸ್ಮಯ ಮಾಡಬೇಕೆಂದೇ ಹೊರಟಿದ್ದಾರೆ. ಇದರಿಂದ ಸಾಹಸ ಚಿತ್ರಗಳನ್ನು ನಿರ್ಮಾಣ ಮಾಡಬಹುದೆ ಹೊರತು ದೇಶದ ಜನತೆಗೆ ಒಂದಿಷ್ಟೂ ಒಳಿತಾಗುವುದಿಲ್ಲ ಎಂದು ಹೇಳಿದರು. ಆರ್ಥಿಕ ಸುಧಾರಣೆಗೆ ಸಂಬಂಸಿದಂತೆ ಈವರೆಗಿನ ಎಲ್ಲ ಪ್ರಧಾನಿಗಳು ಆರ್ಥಿಕ ತಜ್ಞರ ಸಲಹೆ ಪಡೆಯುತ್ತಿದ್ದರು. ಆದರೆ, ಪ್ರಧಾನಿ ನರೇಂದ್ರಮೋದಿ ಯಾರ ಸಲಹೆಯನ್ನೂ ಪಡೆಯದೆ ಏಕಾಏಕಿ ನಿರ್ಧಾರ ತೆಗೆದುಕೊಂಡುದು ಸರಿಯಲ್ಲ ಎಂದು ಚಂದ್ರಶೇಖರ್ ಹೇಳಿದರು. ಪತ್ರಕರ್ತ ದೀಪಕ್ ತಿಮ್ಮಯ್ಯ, ಸಮತಾ ಸೈನಿಕ ದಳದ ಅಧ್ಯಕ್ಷ ಎಂ.ವೆಂಕಟಸ್ವಾಮಿ ಮತ್ತಿತರರು ಹಾಜರಿದ್ದರು.

► Follow us on –  Facebook / Twitter  / Google+

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin