ಮೋದಿ ಭೇಟಿ ನಿನ್ನೆಲೆಯಲ್ಲಿ ಧರ್ಮಸ್ಥಳದಲ್ಲಿ ಕಂಡುಕೇಳರಿಯದ ಸೆಕ್ಯೂರಿಟಿ

ಈ ಸುದ್ದಿಯನ್ನು ಶೇರ್ ಮಾಡಿ

Dharmastala--01

ಮಂಗಳೂರು,ಅ.28-ಮೋದಿ ಅವರ ಆಗಮನದ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕಂಡುಕೇಳರಿಯದ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು. ಶ್ರೀಕ್ಷೇತ್ರ ನವವಧುವಿನಂತೆ ಶೃಂಗಾರಗೊಂಡಿದೆ.   ಇದೇ ವೇಳೇ ಶ್ರೀ ಕ್ಷೇತ್ರದ ಭಕ್ತಾದಿಗಳ ಅನುಕೂಲಕ್ಕಾಗಿ ಇಂದು ರಾತ್ರಿ 9 ಗಂಟೆಯವರೆಗೆ ಸ್ವಾಮಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಶ್ರೀ ಕ್ಷೇತ್ರಕ್ಕೆ ಪ್ರಧಾನಿ ಮೋದಿ ಆಗಮನ ಹಿನ್ನೆಲೆಯಲ್ಲಿ ನಾಳೆ ಮಧ್ಯಾಹ್ನ 2 ಗಂಟೆವರೆಗೂ ಭಕ್ತಾದಿಗಳಿಗೆ ದರ್ಶನ ಭಾಗ್ಯ ಇರುವುದಿಲ್ಲ. ನಾಳೆ ಬೆಳಗ್ಗೆ 9 ಗಂಟೆಗೆ ಧರ್ಮಸ್ಥಳಕ್ಕೆ ಬರಲಿರುವ ಪ್ರಧಾನಿ ಅಲ್ಲಿಂದ ಮಧ್ಯಾಹ್ನ 1 ಗಂಟೆಗೆ ಹೊರಡಲಿದ್ದಾರೆ. ಭದ್ರತಾ ದೃಷ್ಟಿಯಿಂದಾಗಿ ನಾಳೆ ಬೆಳಗ್ಗೆ 9 ಗಂಟೆ ಬಳಿಕ ಧರ್ಮಸ್ಥಳ-ಉಜಿರೆ-ಕೊಕ್ಕಡ ನಡುವಿನ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ. ಚಾರ್ಮಾಡಿ, ಮಂಗಳೂರು ಕಡೆಯಿಂದ ಬರುವ ರಸ್ತೆಗಳು ಮುಕ್ತವಾಗಿರುತ್ತವೆ. ಸಮಾರಂಭ ನಡೆಯುವ ಉಜಿರೆಯ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣಕ್ಕೆ ಬೆಳಗ್ಗೆ 10.30ರೊಳಗೆ ಸಾರ್ವಜನಿಕರು ಬಂದು ಪ್ರವೇಶಿಸಿಬಹುದು.

ಪ್ರಧಾನಿಯವರ ಬಳಕೆಗಾಗಿ ವಿಶೇಷ ವಾಯುಸೇನಾ ವಿಮಾನದಲ್ಲಿ ಗುಂಡು ನಿರೋಧಕ ಐಷಾರಾಮಿ ಕಾರನ್ನು ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ತರಲಾಗಿದೆ. ಈ ಕಾರು ನಾಳೆ ಬೆಳಗ್ಗೆ ಈ ಕಾರು ಧರ್ಮಸ್ಥಳ ತಲುಪಲಿದೆ. ಉಜಿರೆ ಹೆಲಿಪ್ಯಾಡ್ ನಿಂದ ಧರ್ಮಸ್ಥಳ ದೇವಸ್ಥಾನ, ಉಜಿರೆಯ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಪ್ಯಾಡ್ ಹಿಂದಿರುಗುವವರೆಗೆ ಈ ಕಾರನ್ನೇ ಪ್ರಧಾನಿಯವರು ಬಳಕೆ ಮಾಡಲಿದ್ದಾರೆ.

Facebook Comments

Sri Raghav

Admin