ಮೋದಿ ಸ್ವಾತಂತ್ರ್ಯೋತ್ಸವ ಭಾಷಣ ಜನರ ದಿಕ್ಕು ತಪ್ಪಿಸುತ್ತಿದೆ : ಕಾಂಗ್ರೆಸ್ ಟೀಕೆ

ಈ ಸುದ್ದಿಯನ್ನು ಶೇರ್ ಮಾಡಿ

Modi-speechc

ನವದೆಹಲಿ,ಆ.15-ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಭಾಷಣದಲ್ಲಿ ಬಲೂಚಿಸ್ತಾನ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಪಾಕ್ ಆಕ್ರಮಿತ ಕಾಶ್ಮೀರ ವಿಷಯದಲ್ಲಿ ಭಾರತದ ಹಕ್ಕು ಪ್ರತಿಪಾದನೆಯ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಇಂದು ವಾಕ್ ಪ್ರಹಾರ ನಡೆಸಿದೆ.  ರಾಜಧಾನಿಯ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪಕ್ಷದ ಮುಖಂಡ ಮತ್ತು ವಿದೇಶಾಂಗ ವ್ಯವಹಾರಗಳ ಮಾಜಿ ಸಚಿವ ಸಲ್ಮಾನ್ ಖುರ್ಷಿದ್, ಪ್ರಧಾನಿಯವರ ಸ್ವಾತಂತ್ರ್ಯೋತ್ಸವ ಭಾಷಣದ ಕೆಲವು ಅಂಶಗಳು ದಿಕ್ಕು ತಪ್ಪಿಸುವಂತಿದೆ ಎಂದು ಟೀಕಿಸಿದರು. ಪಾಕ್ ಆಕ್ರಮಿತ ಕಾಶ್ಮೀರ ನಮ್ಮ ಹಕ್ಕು. ನಮ್ಮ ಹಕ್ಕು ಪ್ರತಿಪಾದನೆ. ಇದಕ್ಕೆ ನಮ್ಮ ಬೆಂಬಲವಿದೆ. ಆದರೆ, ಬಲೂಚಿಸ್ತಾನ ವಿಷಯವನ್ನು ಇಲ್ಲಿ ಪ್ರಸ್ತಾಪಿಸಿ, ಪಿಒಕೆ ವಿಷಯದಲ್ಲಿ ದೇಶದ ಜನರ ದಿಕ್ಕಿ ತಪ್ಪಿಸಿದ್ದಾರೆ ಎಂದು ಖುರ್ಷಿದ್ ಆರೋಪಿಸಿದರು.  ನಮ್ಮ ದೇಶಕ್ಕೆ ಸಂಬಂಧಪಟ್ಟ ವಿಷಯ ಮಾತನಾಡುವುದನ್ನು ಬಿಟ್ಟು ಬಲೂಚಿಸ್ತಾನದ ವಿಷಯವನ್ನು ಇಲ್ಲಿ ಪ್ರಸ್ತಾಪ ಮಾಡುವ ಅಗತ್ಯವಾದರೂ ಏನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.

ದಿಕ್ಕು ತಪ್ಪಿಸುವ ಪ್ರಧಾನಿ ಭಾಷಣ: ಕಾಂಗ್ರೆಸ್ ಕಿಡಿ

Facebook Comments

Sri Raghav

Admin