ಯಡಿಯೂರಪ್ಪ ನಿವಾಸಕ್ಕೆ ಮುತ್ತಿಗೆ ಯತ್ನ

ಈ ಸುದ್ದಿಯನ್ನು ಶೇರ್ ಮಾಡಿ

yaddyurappa

ಶಿವಮೊಗ್ಗ, ಸೆ.23-ಕಾವೇರಿ ವಿಚಾರದಲ್ಲಿ ಬಿಜೆಪಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಆರೋಪಿಸಿ ಎನ್‍ಎಸ್‍ಯುಐ ಕಾರ್ಯಕರ್ತರು ಹಾಗೂ ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ವಿನೋಬಾ ನಗರದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಮೈತ್ರಿ ನಿವಾಸಕ್ಕೆ ಮುತ್ತಿಗೆ ಹಾಕಲು ಕಾರ್ಯಕರ್ತರು ಯತ್ನಿಸಿದರು. ಕಾವೇರಿ ವಿಚಾರದಲ್ಲಿ ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು ಮೌನವಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಯಾವುದೇ ಒತ್ತಡ ಹೇರುತ್ತಿಲ್ಲ ಎಂದು ಮುಖಂಡರು ಈ ವೇಳೆ ಆಕ್ರೋಶ ವ್ಯಕ್ತಪಡಿಸಿದರು.ಯಡಿಯೂರಪ್ಪ ಮನೆ ಮುತ್ತಿಗೆ ಯತ್ನ ತಿಳಿದ ಕೂಡಲೇ ವಿನೋಬಾ ನಗರ ಠಾಣೆ ಪೊಲೀಸರು ಧಾವಿಸಿ ಕಾರ್ಯಕರ್ತರ ಯತ್ನ ವಿಫಲಗೊಳಿಸಿ 23 ಮಂದಿಯನ್ನು ವಶಕ್ಕೆ ಪಡೆದರು.

► Follow us on –  Facebook / Twitter  / Google+

Facebook Comments

Sri Raghav

Admin