ಯಶಸ್ವಿನಿ ಯೋಜನೆಯನ್ನು ರಮೇಶ್‍ಕುಮಾರ್ ಹಾಳು ಮಾಡುತ್ತಿದ್ದಾರೆ : ವಿಶ್ವನಾಥ್ ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

Vishwanath--01

ಮೈಸೂರು, ಫೆ.20- ರಾಜ್ಯದಲ್ಲಿ ಉತ್ತಮವಾಗಿ ನಡೆಯುತ್ತಿದ್ದ ಯಶಸ್ವಿನಿ ಯೋಜನೆಯನ್ನು ಆರೋಗ್ಯ ಸಚಿವ ರಮೇಶ್‍ಕುಮಾರ್ ಅವರು ಹಾಳು ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಆರೋಪಿಸಿದ್ದಾರೆ. ಕೇಂದ್ರದಲ್ಲಿ ವಿಫಲವಾಗಿರುವ ವಾಜಪೇಯಿ ಶ್ರೀ ಯೋಜನೆಯೊಂದಿಗೆ ಯಶಸ್ವಿ ಯೋಜನೆಯನ್ನು ಸೇರ್ಪಡೆ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಅವರು ಖಂಡಿಸಿದ್ದಾರೆ.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಡವರಿಗೆ, ಮಧ್ಯಮ ವರ್ಗದವರಿಗೆ, ರೈತರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸುತ್ತಿದ್ದ ಯಶಸ್ವಿನಿ ಯೋಜನೆಯನ್ನು ಕೊಂದುಹಾಕುವ ಕೆಲಸ ನಡೆಯುತ್ತಿದೆ. ಬಿಜೆಪಿ ವಿರುದ್ಧ ಮಾತನಾಡುವ ಕಾಂಗ್ರೆಸ್ ನಾಯಕರು ಬಿಜೆಪಿಯ ವೈಫಲ್ಯ ಯೋಜನೆಗಳ ಜತೆ ರಾಜ್ಯ ಸರ್ಕಾರದ ಯಶಸ್ವಿ ಯೋಜನೆಗಳನ್ನು ಸೇರಿಸುವುದು ಎಷ್ಟು ಸಮಂಜಸ ಎಂದು ವಿಶ್ವನಾಥ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವರಿಗೆ ಪತ್ರ ಬರೆದಿದ್ದರೂ ಸೌಜನ್ಯಕ್ಕಾದರೂ ಪ್ರತಿಕ್ರಿಯೆ ನೀಡಿಲ್ಲ ಎಂದು ವಿಶ್ವನಾಥ್ ಕಿಡಿಕಾರಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin