ಯಾರು ಎಷ್ಟೇ ಹೊಟ್ಟೆಕಿಚ್ಚು ಪಟ್ಟರೂ ಕುಮಾರಸ್ವಾಮಿ ಸಿಎಂ ಆಗೇ ಆಗ್ತಾರೆ : ಗೌಡರ ಭವಿಷ್ಯ

ಈ ಸುದ್ದಿಯನ್ನು ಶೇರ್ ಮಾಡಿ

Devegowda--01

ಬೆಂಗಳೂರು, ನ.29- ಯಾರು ಎಷ್ಟೇ ಹೊಟ್ಟೆಕಿಚ್ಚು ಪಟ್ಟರೂ ಸಹ ಎಚ್.ಡಿ.ಕುಮಾರಸ್ವಾಮಿಯವರು ಮತ್ತೆ ಮುಖ್ಯಮಂತ್ರಿಯಾಗುತ್ತಾರೆ. ಅವರ ಮುಖ್ಯಮಂತ್ರಿ ಸ್ಥಾನ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಇಂದಿಲ್ಲಿ ತಿಳಿಸಿದರು. ನಮ್ಮ ಟೈಗರ್ ಕ್ಯಾಬ್ ಸೇವೆಗೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, 20 ತಿಂಗಳ ಆಡಳಿತಾವಧಿಯಲ್ಲಿ ಮುಖ್ಯಮಂತ್ರಿಯಾಗಿ ಅತ್ಯುತ್ತಮವಾದ ಸೇವೆಯನ್ನು ಜನತೆಗೆ ನೀಡಿದ್ದಾರೆ. ಈ ನಾಡಿನಲ್ಲಿ ನಾವು ಕೊಡುವ ಭಾಗ್ಯವೆಂದರೆ ದುಡಿಯುವ ಕೈಗಳಿಗೆ ಆರ್ಥಿಕ ಶಕ್ತಿ ಕೊಡಬೇಕು. ನಾನು ಮುಖ್ಯಮಂತ್ರಿಯಾಗಿದ್ದಾಗ ಚಾಲಕರಿಗಾಗಿ ಕೆಲವು ಯೋಜನೆಗಳನ್ನು ಜಾರಿಗೆ ತಂದಿದ್ದೆ ಎಂದು ಹೇಳಿದರು.

ಬಾಡಿಗೆ ವಾಹನಗಳನ್ನು ಚಾಲನೆ ಮಾಡುವ ಚಾಲಕರಿಗೆ ಅಪಘಾತವಾದಾಗ 5 ಸಾವಿರ ವಿಮೆ ನೀಡುವ ಕಾರ್ಯಕ್ರಮ ಜಾರಿಗೆ ತರಲಾಗಿತ್ತು ಎಂದ ಅವರು, ನಮ್ಮ ಟೈಗರ್ ಎಂದರೆ ಯಾರನ್ನೂ ಲೂಟಿ ಮಾಡುವುದಲ್ಲ, ಅದು ನ್ಯಾಯಬದ್ಧವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin