ಯಾವುದೇ ಕಾರಣಕ್ಕೂ ಬೆಳೆ ಸಾಲ ಮರುಪಾವತಿಗೆ ಗಡುವು ವಿಸ್ತರಿಸಲ್ಲ : ಮಹದೇವ ಪ್ರಸಾದ್

ಈ ಸುದ್ದಿಯನ್ನು ಶೇರ್ ಮಾಡಿ

Mahadev-Prasad

ಬೆಂಗಳೂರು,ಆ.22-ತೀವ್ರ ಬರಗಾಲದ ಹಿನ್ನೆಲೆಯಲ್ಲಿ ಕಳೆದ ವರ್ಷದ ಬೆಳೆ ಸಾಲ ಮರುಪಾವತಿ ಮಾಡುವ ಗಡುವು ಸೆಪ್ಟೆಂಬರ್ ಅಂತ್ಯಕ್ಕೆ ಮುಗಿಯಲಿದ್ದು, ಯಾವುದೇ ಕಾರಣಕ್ಕೂ ಮತ್ತೆ ವಿಸ್ತರಣೆ ಮಾಡುವುದಿಲ್ಲ ಎಂದು ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದಿಂದಾಗಿ ಮಾರ್ಚ್ ಅಂತ್ಯದ ವೇಳೆಗೆ ಪಾವತಿಸಬೇಕಾದ ಬೆಳೆ ಸಾಲವನ್ನು ಸೆಪ್ಟೆಂಬರ್ ಅಂತ್ಯದವರೆಗೂ ಮರುಪಾವತಿಗೆ ಕಾಲಾವಕಾಶ ನೀಡಲಾಗಿತ್ತು. ಈಗ ಮತ್ತೆ ಈ ಗಡವನ್ನು ವಿಸ್ತರಿಸುವುದಿಲ್ಲ ಎಂದರು.
ಪ್ರಸಕ್ತ ಸಾಲಿನಲ್ಲಿ ರೈತರಿಗೆ ಬೆಳೆ ಸಾಲ ನೀಡಲು ಯಾವುದೇ ಹಣದ ಕೊರತೆ ಇಲ್ಲ. ಸಹಕಾರ ಇಲಾಖೆಯಲ್ಲಿ ಇರುವ ಹಣವೆ, ಬೆಳೆ ಸಾಲ ನೀಡಲು ಸಾಕಾಗುತ್ತದೆ. ವಿವಿಧ ಇಲಾಖೆಗಳು ಅಪೆಕ್ಸ್ ಬ್ಯಾಂಕ್ನಲ್ಲಿ ಹಣವನ್ನು ಠೇವಣಿಯನ್ನಾಗಿಡುವ ಪ್ರಕ್ರಿಯೆ ಜಾರಿಯಲ್ಲಿದ್ದು , ಈ ಸಂಬಂಧ ಆರ್ಥಿಕ ಇಲಾಖೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಹೇಳಿದರು.

ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಹೆಚ್ಚಳವಾಗಿರುವ ಹಿನ್ನಲೆಯಲ್ಲಿ ಮುಂದಿನ ಸಾಲಿನಲ್ಲಿ ಕಬ್ಬು ಬೆಳೆಗಾರರಿಗೆ ರಾಜ್ಯ ಸರ್ಕಾರವು ಹೆಚ್ಚುವರಿ ಬೆಂಬಲ ಬೆಲೆ ನಿಗದಿಪಡಿಸಲು ಉದ್ದೇಶಿಸಿದೆ. ಕೇಂದ್ರ ಸರ್ಕಾರ ಈ ವರ್ಷ ಪ್ರತಿ ಟನ್ ಕಬ್ಬಿಗೆ 2300 ರೂ. ಬೆಂಬಲ ಬೆಲೆ ನಿಗದಿಪಡಿಸಿದೆ. ಅಲ್ಲದೆ ಈ ವರ್ಷ ಮಳೆ ಅಭಾವದ ಹಿನ್ನೆಲೆಯಲ್ಲಿ ಕಬ್ಬಿನ ಉತ್ಪಾದನೆ ಮೂರು ಕೋಟಿ ಟನ್ಗಳಿಗೆ ಇಳಿಕೆಯಾಗುವ ಸಾಧ್ಯತೆಗಳಿವೆ ಎಂದು ಸಚಿವರು ತಿಳಿಸಿದರು.

► Follow us on –  Facebook / Twitter  / Google+

Facebook Comments

Sri Raghav

Admin