ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ

ಈ ಸುದ್ದಿಯನ್ನು ಶೇರ್ ಮಾಡಿ

murder

ತುಮಕೂರು, ನ.8- ದುಷ್ಕರ್ಮಿಗಳ ಗುಂಪೊಂದು  ಯುವಕನನ್ನು ಅಟ್ಟಾಡಿಸಿಕೊಂಡು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಕೊಲೆಯಾದ ಯುವಕನನ್ನು ತುಮಕೂರಿನ ಗೋಕುಲ ಬಡಾವಣೆ ನಿವಾಸಿ ಸಿರಾಜ್ (22) ಎಂದು ಗುರುತಿಸಲಾಗಿದೆ.ಯಾವುದೋ ಕೆಲಸದ ನಿಮಿತ್ತ ಸಿರಾಜ್ ಹೊರಗೆ ಹೋಗಿ ರಾತ್ರಿ 10.30ರಲ್ಲಿ ಮನೆಗೆ ಮರಳುತ್ತಿದ್ದಾಗ ಹೊರವಲಯದ ಅಂತರಸನಹಳ್ಳಿ ಕೈಗಾರಿಕಾ ಪ್ರದೇಶದ ಬಳಿ ಮೂವರು ದುಷ್ಕರ್ಮಿಗಳು ಹೊಂಚು ಹಾಕಿ ಏಕಾಏಕಿ ಮಾರಕಾಸ್ತ್ರಗಳಿಂದ ಮನಬಂದಂತೆ ದಾಳಿ ಮಾಡಿ ಅಟ್ಟಾಡಿಸಿಕೊಂಡು ತಲೆ ಹಾಗೂ ದೇಹದ ಹಲವು ಕಡೆ ಹಲ್ಲೆ ನಡೆಸಿದ್ದರಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಸುದ್ದಿ ತಿಳಿದ ಗ್ರಾಮಾಂತರ ಠಾಣೆ ಪಿಎಸ್‍ಐ ಕಾಂತರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಎಸ್‍ಪಿ ಕಾರ್ತಿಕ್‍ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು.ಹಿರಿಯ ಪೊ ಲೀಸ್ ವರಿಷ್ಠಾಧಿಕಾರಿ ಮಂಜುನಾಥ್ ಅವರು ಈ ಸಂಜೆಯೊಂದಿಗೆ ಮಾತನಾಡುತ್ತ, ಘಟನೆ ಬಗ್ಗೆ ಹಲವು ಮಾಹಿತಿ ಲಭ್ಯವಾಗಿದೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವೆ. ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ.ತುಮಕೂರಿನ ಹಳೆಪೇಟೆ ನಿವಾಸಿಗಳಾದ ಕೀರ್ತಿ, ಶ್ರೀನಿವಾಸ್ ಹಾಗೂ ನೆಲಮಂಗಲದವನೊಬ್ಬ ಸೇರಿ ಈ ಕೃತ್ಯ ನಡೆಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆರೋಪಿಗಳ ಬಂಧನಕ್ಕೆ ಎರಡು ವಿಶೇಷ ತಂಡ ರಚಿಸಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.ತುಮಕೂರು ಗ್ರಾಮಾಂತರ ಠಾಣೆ ಸಿಪಿಐ ಕರಿತಿಮ್ಮಯ್ಯ, ಪಿಎಸ್‍ಐ ಕಾಂತರಾಜ್, ಕೋರಾ ಪೊ ಲೀಸ್ ಠಾಣೆ ಪಿಎಸ್‍ಐ ರವಿಕುಮಾರ್ ಅವರನ್ನೊಳಗೊಂಡ ಎರಡು ತಂಡ ರಚಿಸಲಾಗಿದೆ. ಶೀಘ್ರ ಆರೋಪಿಗಳನ್ನು ಬಂಧಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin