ಯುವಕನ ಅನುಮಾನಾಸ್ಪದ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

manavali

ಮಳವಳ್ಳಿ, ಆ.29- ಕೆಲಸ ಮುಗಿಸಿಕೊಂಡು ಸ್ನೇಹಿತನೊಂದಿಗೆ ಹಿಂದಿರುಗುತ್ತಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮಳವಳ್ಳಿ ತಾಲ್ಲೂಕಿನ ದುಗ್ಗನಹಳ್ಳಿ ನಿವಾಸಿ ನಾಗರಾಜ್ (26) ಮೃತಪಟ್ಟ ಯುವಕನಾಗಿದ್ದು, ಈತನ ಸ್ನೇಹಿತ ಸುನಿಲ್ (26) ಪ್ರಜ್ಞಾಹೀನ ಸ್ಥಿತಿಯಲ್ಲಿದ್ದು, ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೆಎಂ ದೊಡ್ಡಿಯಲ್ಲಿ ಮೆಡಿಕಲ್ ಸ್ಟೋರ್‍ಗೆ ಕೆಲಸಕ್ಕೆ ಹೋಗುತ್ತಿದ್ದ ನಾಗರಾಜ್ ರಾತ್ರಿ ಕೆಲಸ ಮುಗಿಸಿಕೊಂಡು ಸ್ನೇಹಿತ ಸುನಿಲ್‍ನನ್ನು ಬೈಕ್‍ನಲ್ಲಿ ಕೂರಿಸಿಕೊಂಡು ದುಗ್ಗನಹಳ್ಳಿಗೆ ಹಿಂದಿರುಗುತ್ತಿದ್ದಾಗ ಕಾಗೇಪುರ ಬಳಿ ಅನುಮಾನಾಸ್ಪದವಾಗಿ ಮಗ ಸಾವನ್ನಪ್ಪಿದ್ದಾನೆಂದು ಈತನ ತಂದೆ ಮರಿಸ್ವಾಮಿ ಪೊಲೀಸರಿಗೆ ದೂರು ನೀಡಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆ ಸರ್ಕಲ್ ಇನ್ಸ್‍ಪೆಕ್ಟರ್ ರಮೇಶ್, ಡಿವೈಎಸ್ಪಿ ಥಾಮಸ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಶವವನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.ಪ್ರಜ್ಞಾನ ಹೀನ ಸ್ಥಿತಿಯಲ್ಲಿರುವ ಸುನೀಲ್‍ಗೆ ಪ್ರಜ್ಞೆ ಬಂದ ನಂತರವಷ್ಟೇ ಸ್ನೇಹಿತನ ಸಾವು ಹೇಗೆ ಸಂಓಭವಿಸಿದೆ ಎಂಬುದು ಗೊತ್ತಾಗಲಿದೆ.ಮಳವಳ್ಳಿ ಗ್ರಾಮಾಂತರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

 

 

► Follow us on –  Facebook / Twitter  / Google+

Facebook Comments

Sri Raghav

Admin