ಯುವಕನ ಬೆತ್ತಲೆ ಪ್ರಕರಣ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿ

ಈ ಸುದ್ದಿಯನ್ನು ಶೇರ್ ಮಾಡಿ

ಮಳವಳ್ಳಿ, ಜೂ.13- ಗುಂಡ್ಲುಪೇಟೆ ತಾಲ್ಲೂಕಿನ ಶ್ಯಾನಾಡ್ರಹಳ್ಳಿಯಲ್ಲಿ ದಲಿತ ಯುವಕನನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿರುವುದನ್ನು ಖಂಡಿಸಿ ಮತ್ತು ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕೆಂದು ಪ್ರಗತಿ ಪರ ಸಂಘನೆಗಳು ಒತ್ತಾಯಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಗಳು ಹೆಚ್ಚಾಗುತ್ತಿದ್ದು, ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಶ್ಯಾನಾಡ್ರಹಳ್ಳಿ ಗ್ರಾಮದ ದೇವಸ್ಥಾನವೊಂದರ ಹತ್ತಿರ ಎಸ್.ಪ್ರತಾಪ್ ಎಂಬ ದಲಿತ ಯುವಕನಿಗೆ ಹಗ್ಗದಿಂದ ಆತನ ಕೈಗಳನ್ನು ಕಟ್ಟಿ ಬೆತ್ತಲೆಗೊಳಿಸಿ ಹಿಂಸಿಸಿರುವುದು ಖಂಡನೀಯ ಎಂದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೆ, ಜಿಲ್ಲೆಯಿಂದಲೇ ಅವರನ್ನು ಗಡಿಪಾರು ಮಾಡುವ ಮೂಲಕ ಘಟನೆಯಿಂದ ನೊಂದ ಎಸ್.ಪ್ರತಾಪ್ ಹಾಗೂ ಅವರ ಕುಟುಂಬಕ್ಕೆ ಸೂಕ್ತ ರಕ್ಷಣೆ ನೀಡಬೇಕೆಂದು ಪಟ್ಟಣದ ತಾಪಂ ಕಚೇರಿಯಿಂದ ತಹಸೀಲ್ದಾರ್ ಕಚೇರಿವರೆಗೆ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಅವರಿಗೆ ಮನವಿ ಪತ್ರ ನೀಡಲಾಗುವುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ವಿಚಾರ ವೇದಿಕೆ ಜಯರಾಜು ತಿಳಿಸಿದ್ದಾರೆ.ಗೋಷ್ಠಿಯಲ್ಲಿ ಕಲ್ಲುಣಿ ನಂಜುಂಡಸ್ವಾಮಿ, ನಾಗರಾಜು, ಪ್ರಸಾದ್, ಆನಂದ ಮುಂತಾದವರು ಪಾಲ್ಗೊಂಡಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ