ಯುವತಿಯರ ಮೇಲೆ ಅತ್ಯಾಚಾರ

ಈ ಸುದ್ದಿಯನ್ನು ಶೇರ್ ಮಾಡಿ

madekeri

ಮಡಿಕೇರಿ, ಆ.29- ಪ್ರವಾಸಿ ತಾಣಕ್ಕೆ ಭೇಟಿ ನೀಡಲು ಬಂದಿದ್ದ ಇಬ್ಬರು ಯುವತಿಯರನ್ನು ದುಷ್ಕರ್ಮಿಗಳು ಅಪಹರಿಸಿ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು, ಸ್ಥಳೀಯರು ಈ ಘಟನೆಯಿಂದ ಆತಂಕಗೊಂಡಿದ್ದಾರೆ. ಮಡಿಕೇರಿಗೆ ಪ್ರವಾಸಕ್ಕೆಂದು ಬಂದಿದ್ದ ಯುವತಿಯರನ್ನು ದೇವಾಲಯ ತೋರಿಸುವುದಾಗಿ ಕರೆದೊಯ್ದ ದುಷ್ಕರ್ಮಿಗಳು ಭಾಗಮಂಡಲ ಸಮೀಪ ಅತ್ಯಾಚಾರ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

ತಡರಾತ್ರಿ ಇವರು ದುಷ್ಕರ್ಮಿಗಳಿಂದ ತಪ್ಪಿಸಿಕೊಂಡು ಪೊಲೀಸ್ ಠಾಣೆಗೆ ಬಂದು ನಡೆದ ಕೃತ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ. ಇದರಿಂದ ಪೊಲೀಸರು ಕೂಡ ಗಾಬರಿಗೊಂಡು ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ.ದುಷ್ಕರ್ಮಿಗಳಿಗೆ ಈಗಾಗಲೇ ಶೋಧ ನಡೆಸಲಾಗಿದ್ದು, ಯುವತಿಯರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin