ಯೋಗಿ ವಿರುದ್ಧ ಅವಾಚ್ಯ ಶಬ್ದ ಬಳಸಿದ್ದಕ್ಕೆ ಕ್ಷಮೆ ಕೇಳಿದ ದಿನೇಶ್ ಗುಂಡೂರಾವ್

ಈ ಸುದ್ದಿಯನ್ನು ಶೇರ್ ಮಾಡಿ

Yogi-Adityanath-Dinesh-gund

ಬೆಂಗಳೂರು,ಏ.15-ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಕ್ಷಮೆ ಕೇಳಿದ್ದಾರೆ. ಉತ್ತರ ಪ್ರದೇಶ ಮತ್ತು ಜಮ್ಮುವಿನಲ್ಲಿ ನಡೆದ ಅತ್ಯಾಚಾರ ಪ್ರಕರಣಗಳನ್ನು ಖಂಡಿಸಿ ನಗರದ ಆನಂದರಾವ್ ವೃತ್ತದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆ ಸಂದರ್ಭದಲ್ಲಿ ದಿನೇಶ್ ಗುಂಡೂರಾವ್ ಅವರು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ದ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು.

ಅವರ ಹೇಳಿಕೆ ವಿರೋಧಿಸಿ ಬಿಜೆಪಿಯಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗಿತ್ತು. ಇಂದು ಅವರು ನೀಡಿದ ಹೇಳಿಕೆಗೆ ತೀವ್ರ ವಿಷಾದ ವ್ಯಕ್ತಪಡಿಸಿರುವ ದಿನೇಶ್ ಗುಂಡೂರಾವ್ ಭಾವೋದ್ವೇತದಲ್ಲಿ ಆ ರೀತಿ ಹೇಳಿಕೆ ನೀಡಿದ್ದೇನೆ. ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಳ್ಳದಿದ್ದಕ್ಕೆ ಬೇಸತ್ತು ಹೇಳಿಕೆ ನೀಡಿದ್ದೆ. ಆದರೆ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ನನ್ನ ಮನಸ್ಸಿಗೆ ನೋವಾಗಿದೆ. ಅದಕ್ಕಾಗಿ ವಿಷಾದ ವ್ಯಕ್ತಪಡಿಸಿದ್ದೇನೆ ಎಂದರು.

Facebook Comments

Sri Raghav

Admin