ಯೋಗೇಶ್ ಮಾಸ್ಟರ್ ಮೇಲೆ ಬಣ್ಣ ಎಸೆದ 7 ಮಂದಿ ಬಂಧನ

ಈ ಸುದ್ದಿಯನ್ನು ಶೇರ್ ಮಾಡಿ

Yogish-Master

ದಾವಣಗೆರೆ,ಮಾ.18- ಕಳೆದ ವಾರ ನಗರದಲ್ಲಿ ಸಾಹಿತಿ ಯೋಗೇಶ್ ಮಾಸ್ಟರ್ ಮೇಲೆ ಬಣ್ಣ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ್ ತಿಳಿಸಿದರು. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಮೇಲೆ ಸಿಆರ್‍ಪಿಸಿ ಕಾಯ್ದೆ 107ರ ಅನ್ವಯ ಹಾಗೂ ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಹೇಳಿದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಪ್ರಸಾದ್ ಮತ್ತು ಚೇತನ್ ಎಂಬುವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಇನ್ನುಳಿದವರು ನ್ಯಾಯಾಲಯದಲ್ಲಿ ಜಾಮೀನು ಪಡೆದಿದ್ದಾರೆ ಎಂದು ತಿಳಿಸಿದರು.

ಇಂತಹ ಕೃತ್ಯಗಳಲ್ಲಿ ಆರೋಪಿಗಳು ಪುನಃ ಮುಂದುವರೆಸಿದರೆ ಜಿಲ್ಲೆಯಿಂದ ಗಡಿಪಾರು ಮಾಡಲಾಗುವುದು ಎಂದು ಎಚ್ಚರಿಸಿದರು. ಮೂರು ದಿನಗಳ ಹಿಂದೆ ನಡೆದಿದ್ದ ಹಾಲೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈಗಾಗಲೇ ಮೂರು ಜನ ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin