ಯೋಜನೆಗಳ ತ್ವರಿತ ಅನುಷ್ಠಾನಕ್ಕೆ ಬಿಜೆಪಿ ಸಿಎಂಗಳಿಗೆ ವರಿಷ್ಠರ ಸಲಹೆ

ಈ ಸುದ್ದಿಯನ್ನು ಶೇರ್ ಮಾಡಿ

Amith-Sha

ನವದೆಹಲಿ, ಆ.27-ಕೇಂದ್ರ ಸರ್ಕಾರ ಅನುಷ್ಠಾನಗೊಳಿಸಿರುವ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಬಿಜೆಪಿ ಆಡಳಿತ ಇರುವ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪಕ್ಷದ ವರಿಷ್ಠರು ಇಂದು ಸಲಹೆ ಮಾಡಿದ್ದಾರೆ.   ಉತ್ತಮ ಆಡಳಿತ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ರಾಜ್ಯಗಳನ್ನು ಅಭಿವೃದ್ಧಿಗೊಳಿಸುವ ಜೊತೆಗೆ ಪಕ್ಷವನ್ನು ಬಲಪಡಿಸಲು ಸಹ ಸೂಚಿಸಲಾಗಿದೆ.  ಸಾಂಸ್ಥಿಕ ವಿಸ್ತರಣೆ ಮತ್ತು ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ವಿಷಯಗಳೂ ಸೇರಿದಂತೆ ಪ್ರಸ್ತುತ ವಿದ್ಯಮಾನಗಳ ಕುರಿತು ಇಂದು ನಡೆದ ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿಗಳ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಿತು. ಉತ್ತರ ಪ್ರದೇಶ, ಪಂಜಬ್ ಮತ್ತು ಗುಜರಾತ್ ರಾಜ್ಯಗಳ ವಿಧಾನಸಭೆ ಚುನಾವಣೆಗಳ ಹಿನ್ನೆಲೆಯಲ್ಲಿಯೂ ಈ ಸಭೆ ಭಾರಿ ಪ್ರಾಮುಖ್ಯತೆ ಪಡೆದುಕೊಂಡಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಭೆಯನ್ನು ಉದ್ಘಾಟಿಸಿದರು. ಆಯಾ ರಾಜ್ಯಗಳಲ್ಲಿ ಕೈಗೊಳ್ಳಲಾದ ಪ್ರಮುಖ ಅಭಿವೃದ್ಧಿ ಯೋಜನೆಗಳು ಮತ್ತು ಅನುಷ್ಠಾನಗೊಳಿಸಲಾಗಿರುವ ಕೇಂದ್ರ ಸರ್ಕಾರದ ಮಹತ್ವದ ಯೋಜನೆಗಳ ಬಗ್ಗೆ ಸಭೆಯಲ್ಲಿ ಆಯಾ ರಾಜ್ಯಗಳ ಮುಖ್ಯಮಂತ್ರಿಗಳಿಂದ ವಿವರಗಳನ್ನು ಪಡೆಯಲಾಯಿತು.   ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin