ಯೋಜನೆಗಳ ಸದುಪಯೋಗ ಪಡೆದು ಮುಖ್ಯವಾಹಿನಿಗೆ ಬರಬೇಕು

ಈ ಸುದ್ದಿಯನ್ನು ಶೇರ್ ಮಾಡಿ

00

ಗದಗ,ಸೆ.27- ಪರಿಶಿಷ್ಟ ಜಾತಿ, ಪಂಗಡ, ಹಿಂದುಳಿದ ವರ್ಗದವರಿಗೆ ಸರಕಾರ ರೂಪಿಸಿರುವ ಯೋಜನೆಗಳನ್ನು ವಿವಿಧ ಜನಪರ ಯೋಜನೆಗಳ ಸದುಪಯೋಗ ಪಡೆದುಕೊಂಡು ಸಮಾಜದ ಮುಖ್ಯವಾಹಿನಿಗೆ  ಬರಬೇಕು ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ ರಾಜ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಹೇಳಿದರು. ಅವರು ನಗರದ ವಾರ್ಡ ನಂ. 14 ಮತ್ತು ನಂ.16 ವಾರ್ಡನ ವಿವಿಧ ಕಾಮಗಾರಿಗಳ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.

ಸರಕಾರದಿಂದ ಪರಿಶಿಷ್ಟರ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರಿಗಾಗಿ ವಿಶೇಷ ಅನುದಾನದಿಂದ ನಗರದಲ್ಲಿ ಅಭಿವೃದ್ಧಿ ಉತ್ತಮ ಕಾರ್ಯಗಳನ್ನು ಕೈಕೊಳ್ಳಲಾಗುತ್ತಿದೆ ಇವುಗಳಿಂದ ಅವರ ಆರ್ಥಿಕ ಹಾಗೂ ಸಾಮಾಜಿಕ ಉನ್ನತಿಗೆ ಅನುಕೂಲವಾಗುವ ಆಶಯ ಹೊಂದಲಾಗಿದೆ. ಆ ನಿಟ್ಟಿನಲ್ಲಿ ಇಂದು ಒಂದು ಕೋಟಿ ರೂ. ಅನುದಾನದಲ್ಲಿ ಅಂಗನವಾಡಿ, ಸಮುದಾಯ ಭವನ, ವ್ಯಾಯಾಮ ಶಾಲೆ, ಗ್ರಂಥಾಲಯಗಳ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಸಾರ್ವಜನಿಕ ಶೌಚಾಲಯಗಳನ್ನು ಸೂಕ್ತ ನಿರ್ವಹಣೆ ಮಾಡಿ ಬಳಸಿಕೊಂಡು ಉತ್ತಮ ಪರಿಸರ ಇರುವಂತೆ ನೋಡಿಕೊಳ್ಳುವ ಜವಾಬ್ದಾರಿ ಸಾರ್ವಜನಿಕರದ್ದೇ ಆಗಿದೆ. ಮಕ್ಕಳ ವಿಧ್ಯಾಭ್ಯಾಸಕ್ಕಾಗಿ ರಾಜ್ಯ ಸರಕಾರ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದು ಇದರ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಲು ಅವರು ಸಲಹೆ ಮಾಡಿದರು.

ಗದಗ-ಬೆಟಗೇರಿ ನಗರಸಭೈ ಅಧ್ಯಕ್ಷ ಪೀರಸಾಬ ಕೌತಾಳ, ಉಪಾಧ್ಯಕ್ಷ ಶ್ರೀನಿವಾಸ ಹುಯಿಲಗೋಳ, ಸದಸ್ಯರಾದ ಕೃಷ್ಣಾ ಪರಾಪೂರ, ಶ್ರೀಮತಿ ಶಿವಲೀಲಾ ಅಕ್ಕಿ, ಗದಗ-ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಗುರಣ್ಣ ಬಳಗಾನೂರ ನಗರ ಸಭೈ ಸದಸ್ಯ ಮಂಜುನಾಥ ಪೂಜಾರ, ಗದಗ-ಬೆಟಗೇರಿ ಪೌರಾಯುಕ್ತ ಮನ್ಸೂರ ಅಲಿ ಸೇರಿದಂತೆ ನಗರ ಸಭೈ ಸದಸ್ಯರು ಗಣ್ಯರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ತದನಂತರ ರಲ್ಲಿ ವಿವಿಧ ಕಾಮಗಾರಿಗಳಿಗೂ ಸಚಿವರು ಭೂಮಿ ಪೂಜೆ ನೆರವೇರಿಸಿದರು.

 

► Follow us on –  Facebook / Twitter  / Google+

Facebook Comments

Sri Raghav

Admin