ರಕ್ತದಾನದಿಂದಾಗುವ ಪ್ರಯೋಜನದ ಅರಿವು ಮೂಡಿಸಿ

ಈ ಸುದ್ದಿಯನ್ನು ಶೇರ್ ಮಾಡಿ

tasildar-deepti-chikbalapur

ಚಿಕ್ಕಬಳ್ಳಾಪುರ, ಆ.19-ಜಿಲ್ಲೆಯಾದ್ಯಂತ ರಕ್ತದಾನ ಶಿಬಿರಗಳ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ರಕ್ತದಾನದಿಂದಾಗುವ ಪ್ರಯೋಜನ, ಆರೋಗ್ಯ ವೃದ್ಧಿಯ ಬಗ್ಗೆ ಅರಿವು ಮೂಡಿಸುವುದು ಅತ್ಯವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ತಹಶೀಲ್ದಾರರು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ದೀಪ್ತಿ ಆದಿತ್ಯ ಕಾನಡೆ ಸೂಚಿಸಿದರು. ತ್ರೈಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು, ಸಾರ್ವಜನಿಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು. ಎನ್‍ಎಸ್‍ಎಸ್, ಆಶಾ ಕಾರ್ಯಕರ್ತರು, ಸ್ಕೌಟ್ಸ್ ಅಂಡ್ ಗೈಡ್ಸ್ ಮೂಲಕ ಜಿಲ್ಲೆಯಾದ್ಯಂತ ರಕ್ತದಾನದ ಮಹತ್ವದ ಕುರಿತು ತಿಳುವಳಿಕೆ ನೀಡಬೇಕು ಎಂದರು.

ರೆಡ್‍ಕ್ರಾಸ್ ಸಂಸ್ಥೆಯ ಸದಸ್ಯರೊಬ್ಬರು, ಜಿಲ್ಲೆಯ ಐದು ತಾಲ್ಲೂಕುಗಳಿಗೆ ಹೋಲಿಸಿದರೆ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ರಕ್ತದಾನ ಶಿಬಿರಗಳು ಕಡಿಮೆಯಾಗಿವೆ. ಏಪ್ರಿಲ್, ಮೇ, ಜೂನ್, ಜುಲೈ ತಿಂಗಳಲ್ಲಿ ರಕ್ತ ಸಂಗ್ರಹಣೆ ಕಡಿಮೆಯಾಗಿರುತ್ತದೆ ಎಂಬ ಮಾಹಿತಿಯನ್ನು ಸಭೆಗೆ ನೀಡಿದರು.ಅಪರ ಜಿಲ್ಲಾಧಿಕಾರಿ ಕೆ.ಎನ್.ಅನುರಾಧ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆ.ಮಂಜುನಾಥ್, ಭಾರತೀಯ ರೆಡ್‍ಕ್ರಾಸ್ ಸಂಸ್ಥೆಯ ಚಿಕ್ಕಬಳ್ಳಾಪುರ ಶಾಖೆಯ ಕಾರ್ಯದರ್ಶಿ ನಾರಾಯಣಾಚಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರವಿಶಂಕರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಬುರೆಡ್ಡಿ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin