ರಸ್ತೆ ಅಭಿವೃದ್ಧಿಗೆ ಆದ್ಯತೆ : ಶ್ರೀನಿವಾಸ್

ಈ ಸುದ್ದಿಯನ್ನು ಶೇರ್ ಮಾಡಿ

Tarikere

ತರೀಕೆರೆ (ಲಿಂಗದಹಳ್ಳಿ), ಆ.30- ಲಕ್ಕವಳ್ಳಿ ಡ್ಯಾಮ್ ನಿಂದ ಸಂತವೇರಿಗೆ ಪ್ರವಾಸಿಗರು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಅವರಿಗೆ ಸಮಯ ಮತ್ತು ಉತ್ತಮ ರಸ್ತೆಯ ವ್ಯವಸ್ಥೆ ಮಾಡುವ ಉದ್ದೇಶದಿಂದ ಚಿಕ್ಕಮಗಳೂರಿಗೆ ಹಾದು ಹೋಗುವ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಶಾಸಕ ಜಿ.ಹೆಚ್.ಶ್ರೀನಿವಾಸ್ ತಿಳಿಸಿದರು.15 ಕೋಟಿ ರೂ. ವೆಚ್ಚದಲ್ಲಿ ಕ್ಷೇತ್ರದ ಲಕ್ಕವಳ್ಳಿ ಡ್ಯಾಮ್ ನಿಂದ ಸಂತವೇರಿಯವರೆಗೆ ರಾಜ್ಯ ಹೆದ್ದಾರಿಯನ್ನು ಅಗಲೀಕರಣ ಮಾಡುವ ಭೂಮಿ ಪೂಜೆ ಮಾಡಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಉಡೇವಾ ಪಟ್ಟಣದ ಕ್ರಾಸ್ ಬಳಿ ಸಾಕಷ್ಟು ಅಪಘಾತಗಳು ಸಂಭವಿಸಿದ್ದು, ಅದನ್ನು ತಪ್ಪಿಸಲು ಸಾರ್ವಜನಿಕರು ಸರ್ಕಾರದ ಮೇಲೆ ಒತ್ತಡವನ್ನು ಹಾಕಿದ್ದು, ನಮ್ಮ ಸರ್ಕಾರ ರಸ್ತೆ ಅಗಲೀಕರಣಕ್ಕೆ ಹಣ ಬಿಡುಗಡೆ ಮಾಡಿದೆ ಎಂದು ತಿಳಿಸಿದರು.

ನಿರಂತರ ಸರ್ಕಾರದ ಮೇಲೆ ಒತ್ತಡ ತಂದು ತಾಲ್ಲೂಕಿನ ಎಲ್ಲಾ ರಾಜ್ಯ ಹೆದ್ದಾರಿಗಳನ್ನು ಇನ್ನೊಂದು ವರ್ಷದಲ್ಲಿ ಅಭಿವೃದ್ಧಿ ಪಡಿಸಲಾಗುವುದು. ಬೀರೂರು – ದಾವಣಗೆರೆಗೆ ಹಾದುಹೋಗುವ ತಾಲ್ಲೂಕಿಗೆ ಸಂಬಂಧಪಟ್ಟ ಹೆದ್ದಾರಿಯನ್ನು ಅಜ್ಜಂಪುರ – ಬುಕ್ಕಾಂಬುದಿ ನಡುವೆ ರಸ್ತೆಯನ್ನು ಕೆಶಿಪ್ ಯೋಜನೆಯಡಿ 50 ಕೋಟಿ ರೂ.ಗಳಲ್ಲಿ ಅಭಿವೃದ್ಧಿಪಡಿಸಲು ಹಣ ಬಿಡುಗಡೆಯಾಗಿದೆ. ಕಾಮಗಾರಿ ಸಧ್ಯದಲ್ಲೇ ನಡೆಯಲಿದೆ ಎಂದು ಶಾಸಕ ಶ್ರೀನಿವಾಸ್ ತಿಳಿಸಿದರು. ಲಿಂಗದಹಳ್ಳಿ ಹೊರಭಾಗದಲ್ಲಿ ಕೆರೆ ನಿರ್ಮಾಣಕ್ಕೆ 1.3 ಕೋಟಿ ರೂ ವೆಚ್ಚದಲ್ಲಿ ಕೆರೆ ನಿರ್ಮಾಣ ಮಾಡಲು ಈಗಾಗಲೇ ಕಾಮಗಾರಿ ಪ್ರಾರಂಭವಾಗಿದೆ. ಇದರಿಂದಾಗಿ ಈ ಪ್ರಾಂತ್ಯದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದರಾಗದಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಆರೋಪ: ಹಿಂದಿನ ಚುನಾಯಿತ ಪ್ರತಿನಿಧಿಗಳು ಸಾರ್ವಜನಿಕರ ಬದುಕಿಗೆ ಬೇಕಾದಂತಹ ದೂರದೃಷ್ಠಿ ಕೋನದ ಯೋಜನೆಗಳನ್ನು ಅನುಷ್ಠಾನಗೊಳಿಸಲು ವಿಫಲರಾಗಿರುವುದರಿಂದ ಅಭಿವೃದ್ಧಿ ಕೆಲಸಗಳ ಬಗ್ಗೆ ಕಾಳಜಿ ಇಲ್ಲದ ವಿರೋಧ ಪಕ್ಷಗಳಿಗೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲು ಆಗುತ್ತಿಲ್ಲ ಎಂದು ಟೀಕಿಸಿದರು. ಬಿಜೆಪಿ ನಾಯಕರು ರಾಜಕೀಯ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವನ್ನು ವಿನಾಕಾರಣದೋಷಿಸುತ್ತಿರುವುದು ಹಾಸ್ಯಾಸ್ಪದ ಎಂದರು.  ಉಡೇವಾ ಗ್ರಾ.ಪಂ. ಅಧ್ಯಕ್ಷ ಟಿ. ಆಂಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜ್, ಗ್ರಾಪಂ ಸದಸ್ಯರಾದ ಯು.ಗಿರೀಶ್, ಸಿ.ಪರಮೇಶ್, ಸಿ.ರಾಜಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷರು ಕೆ.ಟಿ.ಈಶ್ವರಪ್ಪ ಎಲ್.ಪಾಂಡುರಂಗಪ್ಪ, ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ವೆಂಕಟೇಶ್, ಸಂಗೊಳ್ಳಿರಾಯಣ್ಣ ಯುವ ವೇದಿಕೆಯ ತಾಲ್ಲೂಕು ಕಾರ್ಯದರ್ಶಿ ಪಿ.ದರ್ಶನ್, ಪಿಡಬ್ಲ್ಯೂಡಿ ಎ.ಇ ಗಳಾದ ಕಲ್ಲೇಶಪ್ಪ ಮತ್ತು ಶಿವಸ್ವಾಮಿ ಮುಂತಾದವರು ಇದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin