ರಸ್ತೆ ಬದಿ ವ್ಯಾಪಾರಸ್ಥರು ಪಟ್ಟಣದ ಪುರಸಭಾ ಕಚೇರಿ ಮುಂದೆ ಪ್ರತಿಭಟನೆ

ಈ ಸುದ್ದಿಯನ್ನು ಶೇರ್ ಮಾಡಿ

kr-pete
ಕೆ.ಆರ್.ಪೇಟೆ, ಮಾ.4- ಪಟ್ಟಣದ ರಸ್ತೆ ಬದಿ ವ್ಯಾಪಾರಿಗಳಿಗೆ ವ್ಯಾಪಾರ ಮಾಡಿ ಜೀವನ ನಿರ್ವಹಣೆ ಮಾಡಲು ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೂ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಬೇಕೆಂದು ಆಗ್ರಹಿಸಿ ರಸ್ತೆ ಬದಿ ವ್ಯಾಪಾರಸ್ಥರು ಪಟ್ಟಣದ ಪುರಸಭಾ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.ಕಳೆದ ಹತ್ತಾರು ವರ್ಷಗಳಿಂದ ನಾವುಗಳು ಮುಖ್ಯ ರಸ್ತೆ ಬದಿಗಳಲ್ಲಿ ತಳ್ಳು ಗಾಡಿಗಳ ಮೂಲಕ ಸಣ್ಣಪುಟ್ಟ ಬಂಡವಾಳ ಹಾಕಿಕೊಂಡು ನಿತ್ಯ ನೂರು ಅಥವಾ ಇನ್ನೂರು ರೂ. ಲಾಭ ಮಾಡಿಕೊಂಡು ಜೀವನ ನಡೆಸುತ್ತಿವೆ. ನಮ್ಮನ್ನು ಎತ್ತಂಗಡಿ ಮಾಡುವ ಮೂಲಕ ನಮ್ಮ ಜೀವನ ನಿರ್ವಹಣೆ ನಡೆಸಲು ತೊಂದರೆ ಕೊಡಬಾರದು ಎಂದು ಒತ್ತಾಯಿಸಿದರು.ನಮಗೆ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಅಥವಾ ಬೇರೆ ಕಡೆ ವ್ಯಾಪಾರ ಮಾಡಲು ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು. ಅಲ್ಲಿಯವರೆಗೆ ಈಗ ನಾವು ಮಾಡುತ್ತಿರುವ ಸ್ಥಳದಲ್ಲಿ ವ್ಯಾಪಾರ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.

ರಾಜಸ್ತಾನ ಮತ್ತಿತರರ ಕಡೆಗಳಿಂದ ವಲಸೆ ಬಂದವರಿಗೆ ಅನುಕೂಲ ಮಾಡಿಕೊಡಲು ಇಲ್ಲಿನ ಸ್ಥಳೀಯ ಬಡ ವ್ಯಾಪಾರಿಗಳಿಗೆ ತೊಂದರೆ ಕೊಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಪ್ರತಿಭಟನಾಕಾರರು ನಾವು ತಾತ್ಕಾಲಿಕ ತಳ್ಳುವ ಗಾಡಿಗಳ ಮೂಲಕ ವ್ಯಾಪಾರಿ ಮಾಡಿಕೊಂಡು ಸಂಜೆಯ ಹೊತ್ತಿಗೆ ಮನೆಗೆ ತೆಗೆದುಕೊಂಡು ಹೋಗುತ್ತೇವೆ. ನಿತ್ಯ ಪುರಸಭೆ ಸುಂಕವನ್ನು ಗುತ್ತಿಗೆದಾರರ ಮೂಲಕ ಪಾವತಿ ಮಾಡುತ್ತಿದ್ದೇವೆ ಆದರೂ ಬಡವರ ಮೇಲೆ ಗದಾ ಪ್ರಹಾರ ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು. ರಸ್ತೆ ಬದಿ ವ್ಯಾಪಾರಿಗಳಾದ ನಾವು ಹೂವು, ಹಣ್ಣು ಮತ್ತಿತರರ ಸಣ್ಣ ಪುಟ್ಟ ಪದಾರ್ಥಗಳನ್ನು ಮಾರಲು ನಿರ್ಧಿಷ್ಟ ಸ್ಥಳದಲ್ಲಿ ಅವಕಾಶ ಕಲ್ಪಿಸಿ ಅನುಕೂಲ ಮಾಡಿಕೊಡಬೇಕೆಂದು ಪ್ರತಿಭಟನಾಕಾರರು ಒತ್ತಾಯ ಮಾಡಿದರು.
ಪ್ರತಿಭಟನೆಯ ನೇತೃತ್ವವನ್ನು ಚಿನ್‍ವೆಂಕಟಣ್ಣ, ಚಂದ್ರಣ್ಣ, ಆನಂದ್, ರತ್ನಮ್ಮ, ಗಫಾರ್‍ಖಾನ್, ಶ್ರೀನಿವಾಸ್, ಮುಬಾರಕ್ ಮತ್ತಿತರರು ಪ್ರತಿಭಟನೆಯ ನೇತೃತ್ವವನ್ನು ವಹಿಸಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin