ರಸ್ತೆ ಮಧ್ಯೆ ಕೆಟ್ಟು ನಿಂತ ಲಾರಿ : ಸಂಚಾರ ಅಸ್ತವ್ಯಸ್ತ

ಈ ಸುದ್ದಿಯನ್ನು ಶೇರ್ ಮಾಡಿ

ಚಿತ್ರದುರ್ಗ, ಫೆ.10- ಪವನ ವಿದ್ಯುತ್ ಕಾಮಗಾರಿಗಾಗಿ ಬೃಹದಾಕಾರಾದ ಕಬ್ಬಿಣದ ರೆಕ್ಕೆಗಳನ್ನು ಸಾಗಿಸಲಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ನಿಂತ ಹಿನ್ನೆಲೆಯಲ್ಲಿ ಸುಮಾರು 5 ತಾಸಿಗೂ ಹೆಚ್ಚು ಕಾಲ ವಾಹನ ಸಂಚಾರಕ್ಕೆ ಅಡಚಣೆಯಾದ ಘಟನೆ ಜಿಲ್ಲೆಯ ಚಳ್ಳಕೆರೆಯ ನೆಹರು ವೃತ್ತದ ಬಳಿ ನಡೆದಿದೆ.ಶ್ರೀರಂಗಪಟ್ಟಣ-ಬೀದರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ಚೆನ್ನೈನಿಂದ ಆಂಧ್ರಪ್ರದೇಶಕ್ಕೆ ಗಾಳಿಯಂತ್ರದ ರೆಕ್ಕೆಗಳನ್ನು ಸಾಗಿಸುತ್ತಿದ್ದ ಲಾರಿಯ ಸ್ವಯಂ ಚಾಲಿತ ಯಂತ್ರಗಳು ಸರಿಯಾಗಿ ಕಾರ್ಯ ನಿರ್ವಹಿಸಲಿಲ್ಲ.ಇದರಿಂದಾಗಿ ಪರಿಕರ ಹಾಗೂ ಲಾರಿಯ ಟ್ರ್ಯಾಲಿ ರಸ್ತೆಗೆ ಅಡ್ಡಲಾಗಿ ನಿಂತು ಕೆಲ ಕಾಲ ಆತಂಕಕ್ಕೆ ಕಾರಣವಾಯಿತು. ತಕ್ಷಣ ಸ್ಥಳಕ್ಕೆ ಧಾವಿಸಿದ ಚಳ್ಳಕೆರೆ ಪೊಲೀಸರು ವಾಹನಗಳನ್ನು ಬೇರೆ ಮಾರ್ಗಕ್ಕೆ ಬದಲಾಯಿಸಿ ಹೆದ್ದಾರಿಯನ್ನು ಬಂದ್ ಮಾಡಿ ಕಾರ್ಯಾಚರಣೆ ನಡೆಸಿ ಇಂದು ಮಧ್ಯಾಹ್ನದ ವೇಳೆಗೆ ಅದನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾದರು.ಆದರೆ, ಸುಮಾರು 6 ಕಿ.ಮೀ.ವರೆಗೂ ವಾಹನಗಳು ಸರತಿ ಸಾಲಿನಲ್ಲಿ ನಿಂತು ಪ್ರಯಾಣಿಕರು ಹಾಗೂ ಚಾಲಕರು ಪರದಾಡುವಂತಾಯಿತು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin