ರಸ್ತೆ ಮಧ್ಯೆ ಹೊತ್ತಿ ಉರಿದ ಬೈಕ್

ಈ ಸುದ್ದಿಯನ್ನು ಶೇರ್ ಮಾಡಿ

Bie

ಬೆಂಗಳೂರು, ಆ.13- ಇತ್ತೀಚೆಗೆ ಚಲಿಸುತ್ತಿದ್ದ ಕಾರು, ಬಸ್‍ಗಳಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪ್ರಕರಣಗಳು ಹಸಿರಾಗಿರುವಾಗಲೇ ಇದೀಗ ನಗರದಲ್ಲಿ ಚಲಿಸುತ್ತಿದ್ದ ಬೈಕ್‍ನಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ನಡೆದಿದ್ದು, ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಇಂದು ಬೆಳಗ್ಗೆ ಯಶವಂತಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯ ಟಾಟಾ ಇನ್‍ಸ್ಟಿಟ್ಯೂಟ್ ಸಮೀಪ ರಾಜಾಜಿನಗರದ ನಿವಾಸಿ ದಿವಾನ್ ಎಂಬುವರು ತಮ್ಮ ಸ್ನೇಹಿತನೊಂದಿಗೆ ಬೈಕ್‍ನಲ್ಲಿ ಬರುತ್ತಿದ್ದಾಗ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.

ಇದರಿಂದ ಹೆದರಿದ ಸವಾರರು ಬೈಕ್‍ನಿಂದ ಜಂಪ್ ಮಾಡಿ ಇತ್ತ ಬಂದಿದ್ದಾರೆ. ಅದೇ ಕ್ಷಣದಲ್ಲೇ ಇಡೀ ಬೈಕ್ ಧಗಧಗನೆ ಉರಿದು ಹೋಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಯವಾಗಿಲ್ಲ.  ನಡುರಸ್ತೆಯಲ್ಲೇ ಬೈಕ್ ಬೆಂಕಿಗೆ ಆಹುತಿಯಾದ ಸಂದರ್ಭದಲ್ಲಿ ಸಂಚಾರ  ಅತಿವಿರಳವಾಗಿದ್ದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ. ಸ್ಥಳಕ್ಕೆ ಯಶವಂತಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಶಾರ್ಟ್‍ಸಕ್ಯೂಟ್‍ನಿಂದ ಬೆಂಕಿ  ಹೊತ್ತಿಕೊಂಡಿರಬಹುದೆಂದು ಶಂಕಿಸಲಾಗಿದೆ. ಸವಾರ ದಿವಾನ್‍ನನ್ನು ವಶಕ್ಕೆ ಪಡೆದ ಪೊಲೀಸರು ಏಕಾಏಕಿ ಬೈಕ್ ಹೊತ್ತಿಕೊಳ್ಳಲು ಕಾರಣವೇನೆಂಬುದರ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin