ರಾಜಕಾಲುವೆ ಒತ್ತುವರಿ ತೆರವು ಸ್ಥಗಿತಗೊಳಿಸಲ್ಲ : ಮಂಜುನಾಥರೆಡ್ಡಿ

ಈ ಸುದ್ದಿಯನ್ನು ಶೇರ್ ಮಾಡಿ

gsghsfhsfh

ಬೆಂಗಳೂರು ಆ.6-ಮಳೆ ಅನಾಹುತಕ್ಕೆ ಪ್ರಮುಖ ಕಾರಣವಾಗಿರುವ ರಾಜಕಾಲುವೆ ಒತ್ತುವರಿ ತೆರವು ಕಾರ್ಯವನ್ನು ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಮೇಯರ್ ಮಂಜುನಾಥರೆಡ್ಡಿ ಇಂದಿಲ್ಲಿ ಸ್ಪಷ್ಟಪಡಿಸಿದರು.  ರಣಧೀರ ಕಂಠೀರವ ಉದ್ಯಾನವನ ಲೋಕಾರ್ಪಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಬಿದ್ದ ಭಾರೀ ಮಳೆ ನಗರದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಸಿತು. ಇಂತಹುದನ್ನು ತಪ್ಪಿಸಲು ರಾಜಕಾಲುವೆ ತೆರವಿಗೆ ನಿರ್ಧರಿಸಿದ್ದೇವೆ  ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ಕರೆದು ರಾಜಕಾಲುವೆ ತೆರವುಗೊಳಿಸುವಂತೆ ಸೂಚಿಸಿದ್ದಾರೆ. ಅವರ ಸೂಚನೆಯ ಮೇರೆಗೆ ಇಂದಿನಿಂದ ಬೊಮ್ಮನಹಳ್ಳಿ, ಮಹದೇವಪುರ, ಯಲಹಂಕದಿಂದ ತೆರವು ಕಾರ್ಯ ಪ್ರಾರಂಭಿಸಿದ್ದೇವೆ.

ಎಂತಹ ಪ್ರಭಾವಿ ವ್ಯಕ್ತಿಗಳೇ ರಾಜಕಾಲುವೆ ಒತ್ತುವರಿ ಮಾಡಿದ್ದರೂ ನಾವು ಮುಲಾಜಿಲ್ಲದೆ ತೆರವು ಮಾಡುತ್ತೇವೆ. ಇಂದಿನಿಂದ ನಿರಂತರವಾಗಿ ತೆರವು ಕಾರ್ಯ ಮುಂದುವರಿಸಿ ಎಲ್ಲ ಒತ್ತುವರಿ ಪ್ರದೇಶಗಳನ್ನು ಪಾಲಿಕೆ ವಶಕ್ಕೆ ತೆಗೆದುಕೊಳ್ಳುತ್ತೇವೆ ಎಂದರು.
60 ಸ್ಕೈವಾಕ್: ನಗರದ ವಾಹನದಟ್ಟಣೆಯನ್ನು ಗಮನದಲ್ಲಿಟ್ಟುಕೊಂಡು 60 ಪ್ರಮುಖ ರಸ್ತೆಗಳಲ್ಲಿ ಸ್ಕೈವಾಕ್ ನಿರ್ಮಾಣ ಮಾಡಲು ಕ್ರಮಕೈಗೊಳ್ಳಲಾಗಿದೆ ಎಂದು ಮೇಯರ್ ಹೇಳಿದರು.
ಇದರ ಜತೆಗೆ ಹಾಲಿ ಇರುವ ಸ್ಕೈವಾಕ್‍ಗಳ ದುರಸ್ತಿಗೂ ಕ್ರಮಕೈಗೊಳ್ಳಲಾಗುವುದು ಎಂದು ಮಂಜುನಾಥರೆಡ್ಡಿ ತಿಳಿಸಿದರು.

Facebook Comments

Sri Raghav

Admin