ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾದ ಸಿಎಂ ಪ್ರಧಾನ ಕಾರ್ಯದರ್ಶಿ ಕಚೇರಿ ನವೀಕರಣ

ಈ ಸುದ್ದಿಯನ್ನು ಶೇರ್ ಮಾಡಿ

Office

ಬೆಂಗಳೂರು, ಡಿ.5- ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಕಚೇರಿ  ಲಕ್ಷಾಂತರ ರೂ. ವೆಚ್ಚದಲ್ಲಿ ಸಮಗ್ರವಾಗಿ ನವೀಕರಣಗೊಳ್ಳುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾಗಿರುವ ಎಲ್.ಕೆ.ಅತೀಕ್ ಅವರು ತಮ್ಮ ಕಚೇರಿ ಹಾಗೂ ಅರ ಆಪ್ತ ಸಹಾಯಕರ ಕಚೇರಿಯನ್ನು ನವೀಕರಣ ಮಾಡಲು ಮುಂದಾಗಿದ್ದು, ನೆಲಹಾಸು, ಪೀಠೋಪಕರಣ ಇನ್ನಿತರ ಎಲ್ಲ ವ್ಯವಸ್ಥೆಯೊಂದಿಗೆ ಲಕ್ಷಾಂತರ ರೂ. ವೆಚ್ಚದಲ್ಲಿ ನವೀಕರಣಗೊಳಿಸುತ್ತಿದ್ದಾರೆ. ವಿಧಾನಸೌಧದಲ್ಲಿನ ಅವರ ಕಚೇರಿಯಲ್ಲಿ ಈ ದುರಸ್ತಿ ಕಾರ್ಯ ಭರದಿಂದ ನಡೆದಿದ್ದುಚರ್ಚಾಸ್ಪದವಾಗಿದೆ.  ಈ ಹಿಂದೆ ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ನರಸಿಂಹಮೂರ್ತಿ ಅವರ ನಂತರ ಇತ್ತೀಚೆಗೆ ಅತೀಕ್ ನೇಮಕವಾಗಿದ್ದಾರೆ.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin