ರಾಜಹಂಸ ಬಸ್ ಪಲ್ಟಿಯಾಗಿ ಪ್ರಯಾಣಿಕರಿಬ್ಬರ ಕೈ ಕಟ್ , ನಾಲ್ವರು ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

Bus-Accidentಮೈಸೂರು, ಫೆ.7-ರಾಜಹಂಸ ಬಸ್ ಪಲ್ಟಿ ಹೊಡೆದ ಪರಿಣಾಮ ಇಬ್ಬರು ಪ್ರಯಾಣಿಕರ ಕೈಕಟ್ ಆಗಿದ್ದು, ನಾಲ್ವರ ಕೈ ಮೂಳೆ ಮುರಿದು ಮತ್ತೊಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ನಂಜನಗೂಡಿನ ಗೊಳೂರು ತಿರುವಿನಲ್ಲಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿನಲ್ಲಿ ನಡೆದಿದೆ.ಗಾಯಾಳುಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಮೈಸೂರು ಜಿಲ್ಲೆ, ನಂಜನಗೂಡು ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ಹೊಡೆದಿದೆ ಎಂದು ಹೇಳಲಾಗಿದೆ.ಇನ್ನೂ ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin