ರಾಜಾಜಿನಗರ ಕ್ಷೇತ್ರದ ಮೇಲೆ ಕಣ್ಣಿಟ್ಟ ಸಾ.ರಾ.ಗೋವಿಂದು, ಜೆಡಿಎಸ್‍ನಿಂದ ಸ್ಪರ್ಧೆ..?

ಈ ಸುದ್ದಿಯನ್ನು ಶೇರ್ ಮಾಡಿ

saragovindu
ಬೆಂಗಳೂರು, ಮಾ.29- ರಾಜಾಜಿನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕನಾಗಿದ್ದೇನೆ. ಅದು ಜೆಡಿಎಸ್‍ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಸಾಧ್ಯವಾಗದಿದ್ದರೆ ಬೇರೆ ಪಕ್ಷದಿಂದಲೂ ಕಣಕ್ಕಿಳಿಯಬಹುದು ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ.ಗೋವಿಂದು ತಿಳಿಸಿದ್ದಾರೆ.
ಹಲವು ಅಭಿಮಾನಿಗಳು ನಾನು ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ. ಇದಕ್ಕಾಗಿ ಜೆಡಿಎಸ್ ಪಕ್ಷ ಸೇರಿ ಆ ಪಕ್ಷದ ಅಭ್ಯರ್ಥಿಯಾಗಿ ರಾಜಾಜಿನಗರ ಕ್ಷೇತ್ರದಿಂದ ಕಣಕ್ಕಿಳಿಯಬೇಕೆಂದು ಚಿಂತಿಸಿದ್ದೇನೆ. ಆದರೆ, ಇದು ಅಂತಿಮಗೊಂಡಿಲ್ಲ ಬೇರೆ ಪಕ್ಷದ ಟಿಕೆಟ್ ಸಿಕ್ಕರೂ ಸ್ಪರ್ಧಿಸಲು ಸಿದ್ದ ಎಂದು ಹೇಳಿದ್ದಾರೆ.

Facebook Comments

Sri Raghav

Admin