ರಾಜೀನಾಮೆ ನೀಡುವ ಪ್ರಶ್ನೆಯೇ : ತನ್ವೀರ್ ಸೇಠ್

ಈ ಸುದ್ದಿಯನ್ನು ಶೇರ್ ಮಾಡಿ

tanveer

ಬೆಂಗಳೂರು, ನ.12- ಟಿಪ್ಪು ಜಯಂತಿ ಕಾರ್ಯಕ್ರಮದ ವೇಳೆ ನಾನು ಯಾವುದೇ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿಲ್ಲ. ಈ ಸಂಬಂಧ ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಘಟನೆ ಬಗ್ಗೆ ಹೈಕಮಾಂಡ್ ಯಾವುದೇ ಮಾಹಿತಿ ಕೇಳಿಲ್ಲ ಎಂದು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಪ್ರಕರಣದ ಸಂಬಂಧ ಇಂದು ಸಂಜೆಯೇ ಈ ಬಗ್ಗೆ ವಿವರ ನೀಡುತ್ತೇನೆ. ನೈಜ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ. ರಾಜೀನಾಮೆ ನೀಡುವ ಪ್ರಮೇಯವೇ ಇಲ್ಲ. ಟಿಪ್ಪು ಜಯಂತಿಯಂದು ರಾಜ್ಯದಲ್ಲಿ ಏನೆಲ್ಲ ಬೆಳವಣಿಗೆಗಳು ನಡೆಯುತ್ತಿವೆ ಎಂದು ವೇದಿಕೆಯಲ್ಲಿ ವಾಟ್ಸಪ್ ಮೂಲಕ ಮಾಹಿತಿ ತಿಳಿಯುತ್ತಿದ್ದೆ. ಅಚಾನಕ್ಕಾಗಿ ಈ ಮಾಹಿತಿ ನನ್ನ ಮೊಬೈಲ್‍ಗೆ ಬಂದಿದೆ. ಉದ್ದೇಶಪೂರ್ವಕವಾಗಿ ಈ ಚಿತ್ರ ನೋಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಘಟನೆ ಬಗ್ಗೆ ಬಿಜೆಪಿ ನಾಯಕರು ಅನಗತ್ಯ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin