ರಾಜೀನಾಮೆ ಶ್ರೀನಿವಾಸ್ ಪ್ರಸಾದ್ ಅವರ ವೈಯಕ್ತಿಕ ವಿಚಾರ : ಪ್ರಿಯಾಂಕ್ ಖರ್ಗೆ

ಈ ಸುದ್ದಿಯನ್ನು ಶೇರ್ ಮಾಡಿ

Priyank-Kharghe

ಬಾಗಲಕೋಟೆ,ಅ.17-ರಾಜೀನಾಮೆ ನೀಡುವುದು ಅವರ ವೈಯಕ್ತಿಕ ವಿಚಾರ. ಆದರೆ ನಮ್ಮಿಂದ ಏನಾದರೂ ತೊಂದರೆಯಾಗಿದ್ದರೆ ಅವರು ಹೇಳಿದಂತೆ ಕೇಳಲು ನಾವು ಸಿದ್ದ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಪ್ರಸಾದ್ ರಾಜೀನಾಮೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು ಮೊದಲಿನಿಂದ ಇದನ್ನೇ ಹೇಳುತ್ತಿದ್ದೇನೆ. ಅದಕ್ಕೆ ನಾನು ಬದ್ಧನಾಗಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಅವರ ಮೇಲೆ ಆರೋಪ ಮಾಡುವುದು ತಪ್ಪು ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಮುಖಂಡರು ಅವರೊಂದಿಗೆ ಚರ್ಚೆ ನಡೆಸಿದ್ದಾರೆ. ಪಕ್ಷದ ವರಿಷ್ಠರು ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತಾರೆ ಎಂದು ಹೇಳಿದರು. ಪೇಜಾವರ ಮಠಕ್ಕೆ ಮುತ್ತಿಗೆ ಹಾಕುವುದು ಸಂಘಟನೆಗಳಿಗೆ ಬಿಟ್ಟ ವಿಚಾರ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಸಮಾಜದಲ್ಲಿ ನಡೆಯುತ್ತಿರುವ ವಿಚಾರಗಳ ಬಗ್ಗೆ ಶ್ರೀಗಳು ಮತ್ತು ಪ್ರಗತಿಪರ ಚಿಂತಕರು ಕುಳಿತು ಚರ್ಚಿಸಬೇಕಾದ ಅವಶ್ಯಕತೆ ಇದೆ. ಆದರೆ ಮುತ್ತಿಗೆ ಹಾಕುವುದರಿಂದ ಅಸ್ಪೃಶ್ಯತೆ ದೂರಾಗುವುದಿಲ್ಲ ಎಂದರು.

 

► Follow us on –  Facebook / Twitter  / Google+

Facebook Comments

Sri Raghav

Admin