ರಾಜೀವ್‍ಗಾಂಧಿ ವಿವಿ ಮುಂದಿನ ವರ್ಷ ರಾಮನಗರಕ್ಕೆ ಶಿಫ್ಟ್

ಈ ಸುದ್ದಿಯನ್ನು ಶೇರ್ ಮಾಡಿ

rajiv-gandhi
ಬೆಂಗಳೂರು, ಏ.4- ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯವನ್ನು ರಾಮನಗರಕ್ಕೆ ಸ್ಥಳಾಂತರಿಸಲು ಸರ್ಕಾರದಿಂದ ಆದೇಶ ಬಂದಿದೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಸಲಹೆ ನೀಡಿದ್ದಾರೆ. ಹೀಗಾಗಿ ವಿವಿ ಸ್ಥಳಾಂತರಿಕ್ಕೆ ಯಾವುದೆ ಅಡಚಣೆ ಇಲ್ಲ ಎಂದು ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿಯ ಕುಲಪತಿ ಡಾ.ಕೆ.ಎಸ್.ರವೀಂದ್ರನಾಥ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮುಂದಿನ ವರ್ಷದಿಂದ ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ರಾಮನಗರದಲ್ಲಿ ಕಾರ್ಯ ನಿರ್ವಹಿಸಲಿದೆ. ಸ್ಥಳಾಂತರಕ್ಕೆ ರಾಜ್ಯಪಾಲರು ವಿರೋಧ ವ್ಯಕ್ತಪಡಿಸಿದ್ದಾರೆ ಎಂಬುದು ಸರಿಯಲ್ಲ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಅವರು ಸಲಹೆ ನೀಡಿದ್ದಾರೆ. ಅದರಂತೆ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 19ನೇ ಘಟಿಕೋತ್ಸವ ಸಮಾರಂಭ ಏ.6ರಂದು ಬೆಂಗಳೂರಿನ ನಿಮ್ಹಾನ್ಸ್ ಸಭಾಂಗಣದಲ್ಲಿ ನಡೆಯಲಿದೆ. ಒಟ್ಟು 29,698 ಅಭ್ಯರ್ಥಿಗಳು ತೇರ್ಗಡೆಯಾಗಿ ಪದವಿ ಪಡೆಯಲು ಅರ್ಹರಾಗಿದ್ದಾರೆ. ಆ ಪೈಕಿ 51 ಪಿಎಚ್‍ಡಿ, 330 ಸೂಪರ್ ಸ್ಪೆಷಾಲಿಟಿ, 5,140 ಸ್ಥಾನಕೋತ್ತರ ಪದವಿ, 188 ಫೆಲೋಷಿಪ್‍ಕೋರ್ಸ್, ಸರ್ಟಿಫಿಕೇಟ್ ಕೋರ್ಸ್ 17, 21,172 ವಿದ್ಯಾರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಗುವುದು ಎಂದು ವಿವರಿಸಿದರು.69 ಅಭ್ಯರ್ಥಿಗಳು ಚಿನ್ನದ ಪದಕ ಮತ್ತು ನಗದು ಬಹುಮಾನ ಪಡೆಯಲಿದ್ದಾರೆ. ಜತೆಗೆ 103 ಮಂದಿ ಚಿನ್ನದ ಪದಕ ಮತ್ತು ನಗದು ಬಹುಮಾನವನ್ನು ಪಡೆಯಲಿದ್ದಾರೆ. 9 ಮಂದಿ ನಗದು ಬಹುಮಾನ ಪಡೆಯಲಿದ್ದಾರೆ ಎಂದು ತಿಳಿಸಿದರು.

ದಾವಣಗೆರೆಯ ಜೆಜೆಎಂ ಮೆಡಿಕಲ್ಕಾಲೇಜಿನ ಡಾ.ದೀಪ್ತಿ ಅಗರ್‍ವಾಲ್ 5 ಚಿನ್ನದ ಪದಕ ಮತ್ತು ಒಂದು ನಗದು ಬಹುಮಾನ, ಹಾಸನದ ಧರ್ಮಸ್ಥಳ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಡಾ.ಬಿ.ಎನ್.ಸ್ವಾತಿಮುತ್ತು 5 ಚಿನ್ನದ ಪದಕ, ಬೆಳಗಾವಿಯ ವೈದ್ಯಕೀಯ ಸಂಸ್ಥೆಯ ಡಾ.ಭಾಗ್ಯಶ್ರೀ, ಬೆಂಗಳೂರಿನ ಆರ್‍ವಿ ಡೆಂಟಲ್ ಕಾಲೇಜಿನ ಡಾ.ಅಭಿಷೇಕ್ ಪಾತಕ್ 4 ಚಿನ್ನದ ಪದಕವನ್ನು ಪಡೆದಿದ್ದಾರೆ ಎಂದರು.ರಾಜ್ಯಪಾಲ ವಿ.ಆರ್.ವಾಲಾ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಮಾನವ ತಳಿ ಶಾಸ್ತ್ರ ಕೇಂದ್ರದ ನಿರ್ದೇಶಕ ಡಾ.ಎಚ್.ಜಿ.ಶರತ್‍ಚಂದ್ರ ಘಟಿಕೋತ್ಸವದ ಮುಖ್ಯ ಅತಿಥಿಗಳಾಗಿದ್ದಾರೆ.
ಬೆಂಗಳೂರಿನ ನಿವೃತ್ತ ಪ್ರಾಧ್ಯಾಪಕ ಡಾ.ಕೂತುಪಾಡಿ ಗೋವಿಂದರಾವ್ ದಾಸ್ ಮತ್ತು ಅಮೆರಿಕದ ಹೃದಯ ತಜ್ಞ ಡಾ.ಗೋವಿಂದರಾಜ ಸುಬ್ರಹ್ಮಣ್ಯನ್ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ತಿಳಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin