ರಾಜೀವ್ ಗಾಂಧಿಗೆ ಶ್ರದ್ಧಾಂಜಲಿ ಸಲ್ಲಿಸಿದ ನರೇಂದ್ರ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

Modi

ನವದೆಹಲಿ ಆ. 20 : ಮಾಜಿ ಪ್ರಧಾನಿ ರಾಜೀವ್‍ಗಾಂಧಿ ಅವರ 72ನೆ ಜನ್ಮದಿನದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶ್ರದ್ಧಾಂಜಲಿ ಸಮರ್ಪಿಸಿದ್ದಾರೆ. ಮಾಜಿ ಪ್ರಧಾನಮಂತ್ರಿ ರಾಜೀವ್‍ಗಾಂಧೀಜಿ ಅವರ ಜನ್ಮ ದಿನದ ಅಂಗವಾಗಿ ಅವರನ್ನು ನಾನು ಸ್ಮರಿಸುತ್ತೇನೆ ಎಂದು ಮೋದಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ. 1944 ಆಗಸ್ಟ್ 20ರಂದು ಜನಿಸಿದ ರಾಜೀವ್, 1984 ರಿಂದ 1989ರ ವರೆಗೆ ದೇಶದ ಪ್ರಧಾನಿಯಾಗಿದ್ದರು. 1984ರಲ್ಲಿ ತಮ್ಮ ತಾಯಿ ಇಂದಿರಾಗಾಂಧಿ ಹತ್ಯೆಯಾದ ಬಳಿಕ ಅವರು ಭಾರತದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ್ದರು.
ಮೇ 21, 1991ರಂದು ತಮಿಳುನಾಡಿನ ಶ್ರೀ ಪೆರಂಬದೂರಿನಲ್ಲಿ ಎಲ್‍ಟಿಟಿಇ ಮಾನವ ಬಾಂಬ್‍ಗೆ ರಾಜೀವ್‍ಗಾಂಧಿ ಬಲಿಯಾಗಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin

Comments are closed.