ರಾಜು ಕಾಗೆ ನಡೆದುಕೊಂಡಿರುವ ರೀತಿ ಸರಿಯಲ್ಲ : ದೇಶಪಾಂಡೆ

ಈ ಸುದ್ದಿಯನ್ನು ಶೇರ್ ಮಾಡಿ

Deshapande

ಬೆಂಗಳೂರು, ಜ.10- ಸಂಸದ ಅನಂತ್‍ಕುಮಾರ್ ಹೆಗ್ಡೆ, ಶಾಸಕ ರಾಜು ಕಾಗೆ ನಡೆದುಕೊಂಡಿರುವ ರೀತಿ ಸರಿಯಲ್ಲ ಎಂದು ಭಾರೀ ಕೈಗಾರಿಕಾ ಸಚಿವ ಆರ್. ವಿ.ದೇಶಪಾಂಡೆ ಬೇಸರ ವ್ಯಕ್ತಪಡಿಸಿದರು.ಸಚಿವ ಸಂಪುಟ ಸಭೆಗೂ ಮುನ್ನ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಏನಾಗಿದೆಯೋ ಗೊತ್ತಿಲ್ಲ. ಶಾಸಕರು, ಸಂಸದರಾದವರು ಹಲ್ಲೆ ಮಾಡುವ ರೀತಿ ವರ್ತಿಸಿರುವುದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ. ಕಾನೂನು ರೀತಿ ಸೂಕ್ತ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಡಿಸಿಯಿಂದ ವರದಿ ಕೇಳಿದ ಸಚಿವರುವೈದ್ಯರ ಮೇಲೆ ಸಂಸದ ಅನಂತ್‍ಕುಮಾರ್ ಹೆಗ್ಡೆ ನಡೆಸಿರುವ ಹಲ್ಲೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರಿಂದ ವರದಿ ಕೇಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ರಮೇಶ್‍ಕುಮಾರ್ ತಿಳಿಸಿದ್ದಾರೆ.ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ

ಗಳಿಗೆ ವರದಿ ನೀಡಲು ಸೂಚಿಸಲಾಗಿದೆ ಎಂದರು.ವೈದ್ಯರು ನಮ್ಮ ಇಲಾಖೆಯ ಕುಟುಂಬದವರು. ವೈದ್ಯರ ಮೇಲೆ ಹಲ್ಲೆಯಾದರೆ ಸುಮ್ಮನೆ ಕೂರುವುದಿಲ್ಲ. ಕಠಿಣ ಕ್ರಮಕೈಗೊಳ್ಳಲಾಗುವುದು ಎಂದ ಅವರು, ಹಲ್ಲೆ ಪ್ರಕರಣ ಅಮಾನುಷವಾದುದು. ಶಾಸಕ ರಾಜು ಕಾಗೆ ಅವರು ಮಾಡಿರುವ ಹಲ್ಲೆ ಕೂಡ ಸರಿಯಲ್ಲ. ಯಾವ ಪಕ್ಷದವರೇ ಮಾಡಿದರೂ ಅಂತಹ ಘಟನೆಗಳು ತಪ್ಪು ಎಂದು ಹೇಳಿದರು.ನಿಗಮ ಮಂಡಳಿ ಅಧ್ಯಕ್ಷರಿಗೆ ಭತ್ಯೆ ಹೆಚ್ಚಳ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು ಈ ರೀತಿ ಮಾಡುವುದು ಸರಿಯಲ್ಲ. ಅತಿಯಾಗಿ ಏಕೆ ಏರಿಕೆ ಮಾಡಿದ್ದಾರೋ ಗೊತ್ತಿಲ್ಲ. ಭತ್ಯೆ, ಮನೆ ಬಾಡಿಗೆ,ಅನುದಾನ ಏರಿಕೆ ಮಾಡಿರುವ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin