ರಾಜ್ಯಗಳು ಪ್ರತ್ಯೇಕ ಬಾವುಟ ಹೊಂದಬಾರದು ಎಂದು ಸಂವಿಧಾನದಲ್ಲಿ ಎಲ್ಲೂ ಇಲ್ಲ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Siddaramaiha-CM

ಹುಬ್ಬಳ್ಳಿ, ಜು.20 – ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯಗಳು ಪ್ರತ್ಯೇಕ ಬಾವುಟ ಹೊಂದಬಾರದು ಎಂದು ಸಂವಿಧಾನದಲ್ಲಿ ಎಲ್ಲೂ ಇಲ್ಲ. ಈ ಕುರಿತು ನಾನು ಒಬ್ಬ ವಕೀಲನಾಗಿ ವಾದ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಇಂದಿಲ್ಲಿ ಹೇಳಿದರು.  ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಪ್ರತ್ಯೇಕ ಬಾವುಟ ಇರಬೇಕು ಎಂಬುದು ಬಹಳ ವರ್ಷಗಳ ಬೇಡಿಕೆಯಾಗಿದೆ. ಇದರ ಸಾಧಕ-ಬಾಧಕಗಳ ಕುರಿತು ಚರ್ಚಿಸಲು ಸಮಿತಿ ರಚಿಸಲಾಗಿದೆ. ಇದರ ವರದಿ ಬಂದ ನಂತರ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ. ಇದರಿಂದ ರಾಷ್ಟ್ರದ ಸಾರ್ವಭೌತ್ವ ಮತ್ತು ಐಕ್ಯತೆಗೆ ಯಾವುದೇ ಧಕ್ಕೆ ಬರುವುದಿಲ್ಲ ಎಂದು ಹೇಳಿದರು.

ಬೆಂಗಳೂರು ಮೆಟ್ರೋದಲ್ಲಿ ಹಿಂದಿ ಭಾಷೆ ಹೇರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯನವರು, ಮೆಟ್ರೋ ನಿಲ್ದಾಣಗಳಲ್ಲಿ ಹಿಂದಿ ಹೇರಿಕೆಗೆ ನಮ್ಮ ವಿರೋಧವಿದೆ ಎಂದರು. ಕಳಸಾ-ಬಂಡೂರಿ ಹಾಗೂ ಮಹಾದಾಯಿ ಯೋಜನೆ ಅನುಷ್ಠಾನಕ್ಕೆ ಪ್ರಧಾನಮಂತ್ರಿ ಮಧ್ಯಸ್ಥಿತಿಗೆ ವಹಿಸಿ ಪರಿಹಾರ ನೀಡುವುದೊಂದೇ ದಾರಿ. ಪ್ರಧಾನಿ ನರೇಂದ್ರ ಮೋದಿಯವರಿಗೂ ಕೂಡ ಈಗಾಗಲೇ ಈ ಸಂಬಂಧ ಎರಡು ಪತ್ರ ಬರೆದಿದ್ದೇನೆ. ಇಲ್ಲಿಯವರೆಗೆ ಯಾವುದೇ ಉತ್ತರ ಬಂದಿಲ್ಲ. ಗೋವಾ ಮುಖ್ಯಮಂತ್ರಿಗೆ ಮಾತುಕತೆಗೆ ಪತ್ರ ಬರೆದರೆ, ಗೋವಾ ನೀರಾವರಿ ಮಂತ್ರಿ ಪತ್ರ ಬರೆಯುತ್ತಾರೆ. ಯಾವುದೇ ಮುಖ್ಯಮಂತ್ರಿ ಪತ್ರ ಬರೆದರೆ ಮುಖ್ಯಮಂತ್ರಿಗಳೇ ಉತ್ತರಿಸಬೇಕು. ಗೋವಾ ಸರ್ಕಾರ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download   Android / iOS

Facebook Comments

Sri Raghav

Admin