ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ ಮರಳು ಗಣಿಗಾರಿಕೆಯಿಂದ 15.863 ಲಕ್ಷ ರಾಜಧನ ಸಂಗ್ರಹ

ಈ ಸುದ್ದಿಯನ್ನು ಶೇರ್ ಮಾಡಿ

Sand-Mining--01

ಬೆಂಗಳೂರು,ಮಾ.24-ರಾಜ್ಯದಲ್ಲಿ ಕಳೆದ 5 ವರ್ಷಗಳಲ್ಲಿ ಮರಳು ಗಣಿಗಾರಿಕೆಯಿಂದ 15.863 ಲಕ್ಷ ರಾಜಧನ ಸಂಗ್ರಹವಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿ ವಿಧಾನಪರಿಷತ್‍ಗೆ ತಿಳಿಸಿದರು.   ಪ್ರಶ್ನೋತ್ತರ ಕಲಾಪದಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕಳೆದ ಐದು ವರ್ಷಗಳಲ್ಲಿ ಈ ಮೊತ್ತದ ರಾಜಧನ ಮರಳು ಗಣಿಗಾರಿಕೆಯಿಂದ ಸಂಗ್ರಹವಾಗಿದ್ದು , ಇದರಲ್ಲಿ ಶೇ.25ರಷ್ಟು ಮೊತ್ತವನ್ನು ಸಂಬಂಧಿಸಿದ ಗ್ರಾಮ ಪಂಚಾಯ್ತಿಗಳಿಗೆ ಬಿಡುಗಡೆಗೊಳಿಸಬೇಕಾಗಿದೆ ಎಂದರು.

ಕಳೆದ ಐದು ವರ್ಷಗಳಲ್ಲಿ ಗ್ರಾಮ ಪಂಚಾಯ್ತಿಗಳಿಗೆ 1.802 ಲಕ್ಷ ರೂ. ಅನುದಾನವನ್ನು ಪಾವತಿ ಮಾಡಲಾಗಿದ್ದು, 1.483 ಲಕ್ಷ ರೂ.ಗಳನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಿಗೆ ಪಾವತಿ ಮಾಡುವ ಬಾಕಿ ಇದೆ ಎಂದು ತಿಳಿಸಿದರು.   ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ಮಾತ್ರ ರಾಜಧನದ ಶೇ.25ರಷ್ಟು ಮೊತ್ತವನ್ನು ಗ್ರಾಮಪಂಚಾಯಿತಿಗಳಿಗೆ ನೀಡಲು ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿರುತ್ತದೆ. ಇನ್ನುಳಿದ ಖನಿಜಗಳಿಗೆ ಜಿಲ್ಲಾ ಪ್ರತಿಷ್ಠಾನ ನಿಧಿಯನ್ನು ಸಂಗ್ರಹಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.

ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಗೆ ಸಂಗ್ರಹಿಸಿದ ಮೊತ್ತವನ್ನು ಗಣಿ ಗುತ್ತಿಗೆ, ಕಲ್ಲು ಗಣಿ ಗುತ್ತಿಗೆಗಳಿಂದ ಬಾಧಿತ ಪ್ರದೇಶಗಳ ಅಭಿವೃದ್ಧಿ ಚುಟುವಟಿಕೆಗಳಾದ ಪರಿಸರ ಸಂರಕ್ಷಣೆ, ಜನರ ಆರೋಗ್ಯ, ರಸ್ತೆ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ ಇತ್ಯಾದಿ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲಾಗುವುದು ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin