ರಾಜ್ಯದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ : ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--0011

ಹುಬ್ಬಳ್ಳಿ, ಏ.27-ರಾಜ್ಯದಲ್ಲಿ ಪಕ್ಷಾಂತರ ಪರ್ವ ಆರಂಭವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಲ್ಲಿನ ನೃಪತುಂಗ ಬೆಟ್ಟದ ಸಮೀಪ ವಾಯುವಿಹಾರ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ವಿಶ್ವನಾಥ್ ಜೆಡಿಎಸ್ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ಅವರು ನನ್ನ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ರಾಜಕೀಯದಲ್ಲಿರಬೇಕಾದರೆ ಯಾವುದಾದರೊಂದು ಪಕ್ಷದ ಜೊತೆ ಗುರುತಿಸಿಕೊಳ್ಳಬೇಕು. ಇನ್ನು ಚುನಾವಣೆಗೆ ಒಂದು ವರ್ಷ ಅವಧಿ ಇದೆ. ಈಗಲೇ ಪಕ್ಷಾಂತರ ಪರ್ವ ಆರಂಭವಾಗಿದೆ ಎಂದು ತಿಳಿಸಿದರು. ವಿಶ್ವನಾಥ್ ಅವರು ಭವಿಷ್ಯದ ದೃಷ್ಟಿಯಿಂದ ಸೂಕ್ತ ನಿರ್ಧಾರ ಮಾಡುತ್ತಾರೆ ಎಂದು ಹೇಳಿದರು.ಜೆಡಿಎಸ್ ಪಕ್ಷವನ್ನು ಅಪ್ಪ-ಮಕ್ಕಳ ಪಕ್ಷವೆಂದು ವಿಶ್ವನಾಥ್ ಅವರು ಟೀಕಿಸುತ್ತಿದ್ದರಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷವನ್ನು ಬೈದಷ್ಟು ಯಾರೂ ಬೈದಿಲ್ಲ. ಕೆಲವು ಹಂತಗಳಲ್ಲಿ ಪರಸ್ಪರ ನಿಂದನೆ ಸಹಜ. ಆಯಾ ಸನ್ನಿವೇಶದಲ್ಲಿ ಕಟುವಾದ ಪದ ಉಪಯೋಗಿಸುತ್ತಾರೆ. ವೈಯಕ್ತಿಕವಾಗಿ ಅಲ್ಲ, ರಾಜಕೀಯವಾಗಿ ಮಾತನಾಡುತ್ತಾರೆ. ಅದನ್ನು ಗಂಭೀರವಾಗಿ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.
ಉಪಚುನಾವಣೆ ಫಲಿತಾಂಶದ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಅಭ್ಯರ್ಥಿ ಹಾಕದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದಾರೆ. ಯಾವ ಕಾರಣಕ್ಕೆ ನಾವು ಹಾಕಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿದ್ದೇನೆ ಎಂದರು.

ಸಾರ್ವತ್ರಿಕ ಚುನಾವಣೆಯಲ್ಲಿ ಇದೇ ಫಲಿತಾಂಶ ಬರುವುದಿಲ್ಲ. ನಾವು 224 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತೇವೆ. ಯಾವುದೇ ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದರು.  ಹುಬ್ಬಳ್ಳಿಯಲ್ಲಿ ಮೂರು ದಿನ ವಾಸ್ತವ್ಯ ಮಾಡುತ್ತೇನೆ. ಅನಾರೋಗ್ಯದ ಕಾರಣ ಈವರೆಗೆ ಇಲ್ಲಿಗೆ ಬರಲಾಗಿರಲಿಲ್ಲ ಎಂದು ಅವರು ತಿಳಿಸಿದರು.  ಮಾಜಿ ಸಚಿವ ಬಸವರಾಜ ಹೊರಟ್ಟಿ, ಶಾಸಕ ಕೋನರೆಡ್ಡಿ, ಜೆಡಿಎಸ್ ಮುಖಂಡ ರಾಜಣ್ಣ ಕೊರವಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin