ರಾಜ್ಯದಲ್ಲಿ ಪ್ರತಿವರ್ಷ 25 ಸಾವಿರ ಮಕ್ಕಳು ನಾಪತ್ತೆ

ಈ ಸುದ್ದಿಯನ್ನು ಶೇರ್ ಮಾಡಿ

dasgsdgsdfgಬೆಂಗಳೂರು, ಆ.4- ರಾಜ್ಯದಲ್ಲಿ ಪ್ರತಿ ವರ್ಷ 25 ಸಾವಿರ ಮಕ್ಕಳು ಕಾಣೆಯಾಗುತ್ತಿದ್ದಾರೆ. ಅವರನ್ನು ಪತ್ತೆಹಚ್ಚಲು ಸ್ಥಳೀಯ ಸ್ವಯಂಸೇವಾ ಸಂಸ್ಥೆಗಳ ಸಹಕಾರೊಂದಿಗೆ ಶ್ರಮಿಸಲಾಗುತ್ತಿದ್ದು, 5ರಿಂದ 14 ವಯಸ್ಸಿನ ಮಕ್ಕಳು ವಿವಿಧ ಕಾರಣಗಳಿಗಾಗಿ ನಾಮಪತ್ತೆಯಾಗುತ್ತಿದ್ದಾರೆ ಎಂದು ಬೆಂಗಳೂರು   ಗ್ರಾಮಾಂತರ  ಜಿಲ್ಲಾ ಹೆಚ್ಚುವರಿ ಎಸ್ಪಿ ಎಂ.ನಾರಾಯಣ ಆತಂಕ ವ್ಯಕ್ತಪಡಿಸಿದರು.   ಜಿಲ್ಲಾ ಪೊಲೀಸ್ ಅಧೀಕ್ಷಕರ   ಕಚೇರಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಆಪರೇಷನ್ ಮುಸ್ಕಾನ್-2 ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.  ಆಗಸ್ಟ್ 1ರಿಂದ ಆರಂಭವಾಗಿರುವ ಈ ಅಭಿಯಾನವು ಒಂದು ತಿಂಗಳು ನಡೆಯಲಿದ್ದು, ಕಾಣೆಯಾಗಿರುವ 35 ಮಕ್ಕಳ ಪತ್ತೆಗೆ ಶ್ರಮಿಸಲಾಗುವುದು ಮತ್ತು ಮಕ್ಕಳ ಪತ್ತೆಯ ವಿಶೇಷ ಅಭಿಯಾನದಲ್ಲಿ ಪಾಲ್ಗೊಳ್ಳುವ ಪೊಲೀಸರಿಗೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಪ್ರತಿನಿಧಿಗಳಿಗೆ ತರಬೇತಿ ನೀಡಲಾಗುತ್ತಿದೆ.

ಒಂದು ತಿಂಗಳಲ್ಲಿ ಅತಿ ಹೆಚ್ಚು ಮಕ್ಕಳ ನಾಪತ್ತೆ ಪ್ರಕರಣಗಳನ್ನು ಪತ್ತೆಹಚ್ಚುವುದೇ ಈ ಅಭಿಯಾನದ ಮುಖ್ಯಗುರಿಯಾಗಿದೆ ಎಂದು ಹೇಳಿದರು. ಕಳೆದ ಜನವರಿಯಿಂದ ಇಲ್ಲಿಯವರೆಗೆ ಗ್ರಾಮಾಂತರ ಜಿಲ್ಲೆಯಲ್ಲಿ 53 ಮಕ್ಕಳು ಕಾಣೆಯಾಗಿರುವ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 18 ಪ್ರಕರಣಗಳು ಪತ್ತೆಯಾಗಿವೆ. ಉಳಿದ ಪ್ರಕರಣಗಳನ್ನು ಪತ್ತೆಹಚ್ಚಲು ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

Facebook Comments

Sri Raghav

Admin