ರಾಜ್ಯದಾದ್ಯಂತ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ : ಕಮಲ್‍ಪಂಥ್

ಈ ಸುದ್ದಿಯನ್ನು ಶೇರ್ ಮಾಡಿ

Kamal-Pandh

ಬೆಂಗಳೂರು, ಮೇ 12- ರಾಜ್ಯದಲ್ಲಿ ಮತದಾನ ಶಾಂತಿಯುತವಾಗಿ ನಡೆಯುತ್ತಿದೆ ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾದ ಕಮಲ್‍ಪಂಥ್ ತಿಳಿಸಿದ್ದಾರೆ. ಈ ಸಂಜೆಯೊಂದಿಗೆ ಮಾತನಾಡಿದ ಅವರು, ಅಲ್ಲಲ್ಲಿ ಸಣ್ಣಪುಟ್ಟ ಘಟನೆ ಹೊರತುಪಡಿಸಿದಂತೆ ಎಲ್ಲಿಯೂ ಯಾವುದೇ ರೀತಿಯ ಅಹಿತಕರ ಘಟನೆಗಳು ಈತನಕ ನಡೆದಿಲ್ಲ ಎಂದು ಹೇಳಿದರು.

ಮತಗಟ್ಟೆಗಳ ಸಮೀಪ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ಸ್ಥಳೀಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಎಂದರು. ಆರಂಭದಲ್ಲಿ ಕೆಲವು ಮತಗಟ್ಟೆಗಳ ಮತಯಂತ್ರಗಳಲ್ಲಿ ಲೋಪದೋಷ ಕಂಡುಬಂದ ಹಿನ್ನೆಲೆಯಲ್ಲಿ ಮತದಾನ ತಡವಾಗಿ ಶುರುವಾಯಿತು. ಈಗ ಎಲ್ಲಾ ಮತಗಟ್ಟೆಗಳಲ್ಲೂ ಸುಲಲಿತವಾಗಿ ಮತದಾನ ನಡೆಯುತ್ತಿದೆ ಎಂದು ಅವರು ಹೇಳಿದರು. ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೆ ನಾವು ಎಲ್ಲಾ ಕ್ರಮ ಕೈಗೊಂಡಿದ್ದೇವೆ. ಸ್ಥಳೀಯ ಪೊಲೀಸರ ಜತೆಗೆ ನೆರೆ ರಾಜ್ಯಗಳ ಪೊಲೀಸರು ಹಾಗೂ ಕೇಂದ್ರ ಪಡೆಗಳನ್ನು ಸಹ ಬಂದೋಬಸ್ತ್‍ಗಾಗಿ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

Facebook Comments

Sri Raghav

Admin