ರಾಜ್ಯದೆಲ್ಲೆಡೆ ಕೆಂಪೇಗೌಡ ಜಯಂತಿ ಆಚರಣೆಗೆ ಆದೇಶ

ಈ ಸುದ್ದಿಯನ್ನು ಶೇರ್ ಮಾಡಿ

Devegowda

ಬೆಂಗಳೂರು, ಜೂ.27-ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕೆಂಪೇಗೌಡ ಜಯಂತಿ ಆಚರಿಸಲು ಆದೇಶ ಹೊರಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಇಂದಿಲ್ಲಿ ತಿಳಿಸಿದರು. ಸ್ವಾತಂತ್ರ್ಯ ಉದ್ಯಾನವನದಲ್ಲಿ ಹಮ್ಮಿಕೊಂಡಿರುವ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಈಗಾಗಲೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಕೆಂಪೇಗೌಡ ಜಯಂತಿ ಆಚರಿಸು ವಂತೆ ಆದೇಶ ಹೊರಡಿಸಲಾಗಿದೆ.
ಇಂದು ನಡೆಯುವ ಕೆಂಪೇಗೌಡ ಜಯಂತಿ ಹೊರತುಪಡಿಸಿ ಯಾವ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಜಯಂತಿ ಆಚರಿಸಿಲ್ಲವೋ ಅಂತಹ ಪ್ರದೇಶಗಳಲ್ಲಿ ಆಗಸ್ಟ್‍ನೊಳಗೆ ಆಚರಣೆ ಮಾಡಲಾಗುವುದು ಎಂದರು. ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಇನ್ನು ಮುಂದೆ ಜೂ.27ರಂದೇ ರಾಜ್ಯದೆಲ್ಲೆಡೆ ಆಚರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin