ರಾಜ್ಯದ ಮೊದಲ ಸ್ಮಶಾನಯುಕ್ತ ತಾಲ್ಲೂಕು ಘೋಷಣೆ

ಈ ಸುದ್ದಿಯನ್ನು ಶೇರ್ ಮಾಡಿ

kagodu

ಹಾವೇರಿ,ಮೇ 8- ಹಾವೇರಿ ತಾಲ್ಲೂಕನ್ನು ರಾಜ್ಯದ ಮೊದಲ ಸ್ಮಶಾನಯುಕ್ತ ತಾಲ್ಲೂಕು ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಘೋಷಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿ ಬರ ಮತ್ತು ಪ್ರಗತಿ ಪರಿಶೀಲನೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ 88 ಗ್ರಾಮಗಳಲ್ಲೂ ಸ್ಮಶಾನದ ಸೌಲಭ್ಯವಿರುವುದರಿಂದ ಸ್ಮಶಾನಯುಕ್ತ ತಾಲ್ಲೂಕು ಎಂದು ಘೋಷಿಸಿದ್ದಾರೆ.   ಗ್ರಾಮಗಳಲ್ಲಿನ ಜನರು ಗುಳೇ ಹೋಗಬಾರದು ಎಂಬ ಕಾರಣಕ್ಕೆ ಈಗಾಗಲೇ ಉದ್ಯೋಗ ಖಾತ್ರಿ ಯೋಜನೆಯಡಿ ಕೆರೆ ಹೂಳು ತೆಗೆಯುವ ಕೆಲಸ ನಡೆಸಲಾಗುತ್ತಿದೆ ಎಂದರು. ಸರ್ಕಾರದಿಂದ ಪ್ರತಿ ಗ್ರಾಮಗಳಲ್ಲಿ 94 ಸಿ ಅಕ್ರಮ ಸಕ್ರಮದಡಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಿದವರಿಗೆ ಪಿಡಿಒ, ಗ್ರಾಮ ಲೆಕ್ಕಾಧಿಕಾರಿ, ಆರ್‍ಐಗಳು ಪರಿಶೀಲಿಸಿ ಹಕ್ಕುಪತ್ರ ನೀಡಲಾಗುತ್ತಿದೆ. ಈ ಬಗ್ಗೆ ಜನರಲ್ಲೂ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.



ಬೆಳೆ ಪರಿಹಾರ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿ ನೇರವಾಗಿ ರೈತರ ಖಾತೆಗೆ ಪರಿಹಾರದ ಹಣ ನೀಡಲಾಗುತ್ತಿದೆ ಎಂದರು. ಕೆಪಿಸಿಸಿ ಅಧ್ಯಕ್ಷರ ವಿಚಾರವನ್ನು ಹೇಳಲು ಸಚಿವ ಕಾಗೋಡು ತಿಮ್ಮಪ್ಪ ನಿರಾಕರಿಸಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin